ಬೆಂಗಳೂರು: ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನವೆಂಬರ್ 5, 6ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.
ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



                                    