Thursday, November 6, 2025
Google search engine

Homeಅಪರಾಧಕಾನೂನುವಿವಾದಾತ್ಮಕ ಹೇಳಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್

ವಿವಾದಾತ್ಮಕ ಹೇಳಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್

ಮಂಗಳೂರು(ದಕ್ಷಿಣ ಕನ್ನಡ): ಪುತ್ತೂರಿನಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಇಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು. ಈ ಕೇಸ್ ಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ತನಿಖಾಧಿಕಾರಿ‌ ನೊಟೀಸ್ ನೀಡಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ್ರು‌. ಸದ್ಯ ಪುತ್ತೂರು ಕೋರ್ಟ್ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿ ಇರುವಂತದ್ದು. ಹೀಗಾಗಿ ಅರ್ಜಿ ವಿಚಾರಣೆ ಮುಗಿಯೋವರೆಗೆ ಬಲವಂತದ ಕ್ರಮ ಬೇಡ ಎಂದು ಕೋರ್ಟ್ ಹೇಳಿತ್ತು.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್ ವಿರುದ್ದ ಅ.20ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡಿದ್ದರಿಂದ ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಅನ್ವಯ BNS 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗಬೇಕೆಂದು ಕಲಂ:35(3) ಬಿ.ಎನ್.ಎಸ್. ಎಸ್ ಅಡಿ ಪೊಲೀಸರು ನೋಟೀಸು ನೀಡಿದ್ದರು. ನಿನ್ನೆ ಕೋರ್ಟ್ ಗೂ ನಿರೀಕ್ಷಣಾ ಜಾಮೀನು ನೀಡದಂತೆ ಪೊಲೀಸರು ಆಕ್ಷೇಪಣೆ ಸಲ್ಲಿಸಿದ್ದರು. ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸಲು ಕಾರಣ ನೀಡಿ ಪೊಲೀಸರು ಆಕ್ಷೇಪಣೆ ಸಲ್ಲಿಸಿದ್ದರು. ಸದ್ಯ ಅರ್ಜಿ ವಿಚಾರಣೆಯನ್ನು ನವೆಂಬರ್ 10 ಕ್ಕೆ ಕೋರ್ಟ್ ಮುಂದೂಡಿದೆ.

RELATED ARTICLES
- Advertisment -
Google search engine

Most Popular