Thursday, November 6, 2025
Google search engine

Homeರಾಜ್ಯಸುದ್ದಿಜಾಲಮಕ್ಕಳ ಮಾಸವಾಗಿ ನವೆಂಬರ್ ಆಚರಣೆ-ಯೋಜನಾ ನಿರ್ದೇಶಕರು.

ಮಕ್ಕಳ ಮಾಸವಾಗಿ ನವೆಂಬರ್ ಆಚರಣೆ-ಯೋಜನಾ ನಿರ್ದೇಶಕರು.

ವರದಿ :ಸ್ಟೀಫನ್ ಜೇಮ್ಸ್.

ಮಕ್ಕಳ ಮಾಸವಾಗಿ ನವೆಂಬರ್ ಆಚರಣೆ
ಬೆಂಗಳೂರು: ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ನವೆಂಬರ್ ತಿಂಗಳನ್ನು ‘ಮಕ್ಕಳ ಮಾಸ’ವಾಗಿ ಆಚರಿಸಲು ಮಕ್ಕಳ ರಕ್ಷಣಾ ನಿರ್ದೇಶನಾಲಯ ಮುಂದಾಗಿದೆ.
ಪ್ರತಿ ವರ್ಷ ನ.14ರಂದು ಮಕ್ಕಳ ದಿನ ಆಚರಿಸಲಾಗುತ್ತಿದೆ. ಆದರೆ, ಇತ್ತೀಚೆಗೆ ಮಕ್ಕಳ ಮೇಲಿನ ದೌರ್ಜನ್ಯ, ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಗರ್ಭಧಾರಣೆ, ಪೋಕ್ಸ್‌ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ವಿಶೇಷ ಆದ್ಯತೆ ನೀಡಲು ನವೆಂಬರ್ ತಿಂಗಳನ್ನು ‘ಮಕ್ಕಳ ಮಾಸ’ ಎಂದು ಆಚರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.
ಈ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆಗಳು, ಮಕ್ಕಳಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ, ಬಾಲಕಾರ್ಮಿಕರು ಹಾಗೂ ಶಾಲೆ ಬಿಟ್ಟ ಮಕ್ಕಳ ಗುರುತಿಸುವಿಕೆ ಮತ್ತು ರಕ್ಷಣೆ, ಮಕ್ಕಳ ರಕ್ಷಣಾ ಬಲವರ್ಧನೆ, ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಮತ್ತು ತೆರೆದ ಮನೆ ಕಾರ್ಯಕ್ರಮದ ಅನುಷ್ಠಾನ, ಅನಾಥ ಹಾಗೂ ಸಂಕಷ್ಟದಲ್ಲಿನ ಮಕ್ಕಳ ಗುರುತಿಸುವಿಕೆ, ಮಕ್ಕಳ ಸಹಾಯವಾಣಿ ಹಾಗೂ ದತ್ತು ಕಾರ್ಯಕ್ರಮದ ಪ್ರಚಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಇಡೀ ನವೆಂಬರ್ ತಿಂಗಳು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಕ್ರಿಯಾ ಯೋಜನೆ ರೂಪಿಸಿಕೊಂಡು ಅನುಷ್ಠಾನ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ.
ಅಲ್ಲದೆ, ನವೆಂಬರ್ ತಿಂಗಳನ್ನು ಮಕ್ಕಳ ಮಾಸವೆಂದು ಘೋಷಿಸಿ ಆಚರಿಸಿ, ವರದಿಯನ್ನು ಕೇಂದ್ರ ಕಚೇರಿಗೆ ನೀಡುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ .

RELATED ARTICLES
- Advertisment -
Google search engine

Most Popular