ವರದಿ :ಸ್ಟೀಫನ್ ಜೇಮ್ಸ್.
ಹುಕ್ಕೇರಿ
ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ರೈತರು ನಡೆಸಿದ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಹತ್ತರಗಿ ಪೊಲೀಸರು ರೈತರ ಮೇಲೆ ಲಘು ಲಾಠಿ ಚಾಜ್೯ ಮಾಡುತ್ತಿದ್ದಂತೆ ಪೊಲೀಸರ ಮೇಲೆಯೇ ರೈತರು ಕಲ್ಲು ತೂರಾಟ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ಪ್ರತಿಭಟನಾ ನಿರತ ರೈತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಅನ್ನದಾತರು ಇನ್ನಷ್ಟು ಸಿಡಿದೆದ್ದಿದ್ದು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾ ನಿರತ ರೈತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಅನ್ನದಾತರು ಇನ್ನಷ್ಟು ಸಿಡಿದೆದ್ದಿದ್ದು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಲಾಠಿ ಪ್ರಹಾರ ಮಾಡುತ್ತಿದಂತೆ ರೈತರ ಸಹನೆಯ ಕಟ್ಟೆಯೊಡೆದಿದ್ದು, ಹೆದ್ದಾರಿಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನಗಳ ಗಾಜುಗಳು ಪುಡಿಪುಡಿಯಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.