Saturday, November 8, 2025
Google search engine

HomeUncategorizedರಾಷ್ಟ್ರೀಯಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ನವದೆಹಲಿ: ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.

ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು  ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1ರಿಂದ ಡಿಸೆಂಬರ್ 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. .

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯ ನಂತರ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನ ಮಹತ್ವದ್ದಾಗಿದೆ.

RELATED ARTICLES
- Advertisment -
Google search engine

Most Popular