Monday, November 17, 2025
Google search engine

Homeರಾಜ್ಯಸುದ್ದಿಜಾಲಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು.

ಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು.

ವರದಿ :ಸ್ಟೀಫನ್ ಜೇಮ್ಸ್.

ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.

ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ. ಪ್ರತಿಭಟನೆ ವೇಳೆ ಉದ್ರಿಕ್ತ ಪ್ರತಿಭಟನಾಕರರು ಸಂಗಾನಟ್ಟಿ ಬಳಿ ಎರಡು ಟ್ರೇಲರ್​ನ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ್ದರು. ನಂತರ‌ ಗೋದಾವರಿ ಕಾರ್ಖಾನೆ ಆವರಣದಲ್ಲಿನ 20ಕ್ಕೂ ಅಧಿಕ ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಲಾಗಿತ್ತು. ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ಮೂವರು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಅಲ್ಲದೆ ಇದೇ ವೇಳೆ ಎಎಸ್​ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲು‌ ಮುರಿದಿತ್ತು. ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಕಲ್ಲು ತೂರಾಟ, ಪೊಲೀಸರಿಗೆ ಗಾಯ, ಪೊಲೀಸ್ ವಾಹನ ಜಖಂಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕರರ ಗುಂಪಿನ 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

RELATED ARTICLES
- Advertisment -
Google search engine

Most Popular