Monday, November 17, 2025
Google search engine

Homeರಾಜ್ಯಸುದ್ದಿಜಾಲಶಿಕ್ಷಕರು ಮತ್ತು ಮಕ್ಕಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ: ಅಂಶಿಪ್ರಸನ್ನಕುಮಾರ್ ಬಣ್ಣನೆ

ಶಿಕ್ಷಕರು ಮತ್ತು ಮಕ್ಕಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ: ಅಂಶಿಪ್ರಸನ್ನಕುಮಾರ್ ಬಣ್ಣನೆ

ಹುಣಸೂರು: ಶಿಕ್ಷಕರು ಪ್ರತಿಯೊಂದು ಮಗುವಿಗೂ ಶಿಕ್ಷಣ ಮತ್ತು ಸಂಸ್ಕಾರವನ್ನು ಕಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡುತ್ತಿದ್ದಾರೆ ಹಾಗೂ ಶಿಕ್ಷಕರು ಮತ್ತು ಮಕ್ಕಳು ಸಮಾಜದ ಒಂದು ಭಾಗವಾಗಿದ್ದಾರೆಂದು ಸಾಹಿತಿ ಮತ್ತು ಹಿರಿಯ ಪತ್ರಕರ್ತ ಅಂಶಿಪ್ರಸನ್ನಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ರೋಟರಿ ಭವನದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋ ತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರು ವಹಿಸುವ ನಿರ್ಣಾಯಕ ಪಾತ್ರವನ್ನು ಗೌರವಿಸಲು ಮತ್ತು ಗುರುತಿಸಲು ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಭಾರತದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನವು ದೇಶದ ಮೇಲೆ ಶಾಶ್ವತ ಪರಿಣಾಮ ಬೀರಿದ ಪ್ರಸಿದ್ಧ ವಿದ್ವಾಂಸ ಮತ್ತು ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವ ನ್ನೂ ಸಹ ಸೂಚಿಸುತ್ತದೆ.

ಮಕ್ಕಳ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ ೧೪ ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು. ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ರೋಟರಿ ಸಂಸ್ಥೆ ಗುಣಮಟ್ಟ ಶಿಕ್ಷಣವನ್ನು ನೀಡುವ ಜತೆಗೆ ಕ್ರೀಡೆ ಸಾಹಿತ್ಯ ಮತ್ತು ಉತ್ತಮ ಫಲಿತಾಂಶವ ನ್ನು ನೀಡಿ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಡಾ.ಕೆ.ಪಿ.ಪ್ರಸನ್ನ ಮಾತನಾಡಿ ಅಂಶಿ ಪ್ರಸನ್ನಕುಮಾರ್ ಅವರುಸಂಪಾದ ಕರ ಸಂಪಾದಕರಾಗಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯುವ ಪೀಳಿಗೆಗೆ ಮಾರ್ಗದರ್ಶಕರಾಗಿ ಪತ್ರಿಕೋದ್ಯಮ ಕ್ಷೇತ್ರದ ಪಿತಮಾಹ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಬಣ್ಣಿಸಿದರು.
ರೋಟರಿ ಸಂಸ್ಥೆ ಅಧ್ಯಕ್ಷ ಎಚ್.ಆರ್. ಕೃಷ್ಣಕುಮಾರ್ ಮಾತನಾಡಿ ಶಿಕ್ಷಕರು ಮತ್ತು ಮಕ್ಕಳು ಸಮಾಜದ ಅಸ್ತಿಯಾಗಿದ್ದಾರೆ. ಗುಣಮಟ್ಟ ಶಿಕ್ಷಣ ನೀಡಿದರೆ,ಮಾತ್ರ ಸಮಾಜ ಸುಧಾರಣೆಯಾಗಲು ಸಾಧ್ಯ ಎಂದರು.
ಸಮಾರಂಭದ ಅಧ್ಯಕ್ಷತೆವಹಿಸಿದ್ದ ಶಾಲಾ ಸಮಿತಿ ಅಧ್ಯಕ್ಷ ಡಾ.ಚಂದ್ರನಂದನ್ ಮಾತನಾಡಿ ಉತ್ತಮ ಸಮಾಜ ನಿರ್ಮಾಣ ಮಾಡಲು ಶಿಕ್ಷಕರ ಪಾತ್ರಬಹಳ ಮುಖ್ಯವಾಗಿದೆ, ವಿದ್ಯಾರ್ಥಿಗಳು ಕೂಡ ಶಿಕ್ಷಕರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಅಭಿನಂದನೆ:
ಹಿರಿಯ ಪತ್ರಕರ್ತ ಮತ್ತು ಸಾಹಿತಿ ಅಂಶಿಪ್ರಸನ್ನಕುಮಾರ್ ಅವರಿಗೆ ಲಭಿಸಿದ ಕನ್ನಡ ರಾಜ್ಯೋತ್ಸವ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಧರ್ಮಾಪುರ ನಾರಾಯಣ್ ಅವರನ್ನು ಸೇರಿದಂತೆ ಶಾಲೆಯ ಹಿರಿಯ ಶಿಕ್ಷಕಿ ಶೃತಿ ಅವರನ್ನು ಇದೇ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.

ಬಹುಮಾನ ವಿತರಣೆ:
ಶಿಕ್ಷಕರ ದಿನಾಚರಣೆಯ ಆಂಗವಾಗಿ ಮಕ್ಕಳು ಶಿಕ್ಷಕರಿಗೆ ನಡೆಸಿದ ಕ್ರೀಡಾಕೂಟದ ವಿಜೇತರಿಗೆ ಮತ್ತು ಮಕ್ಕಳ ದಿನಾಚರಣೆಯ ಆಂಗವಾಗಿ ನಡೆಸಿದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಶಿಕ್ಷಕರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಶಾಲಾ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ,ಶಾಲಾ ಸಮಿತಿ ಸದಸ್ಯರಾದ ರಾಜಶೇಖರ್,ವಿ. ಶಿವಕುಮಾರ್ ವಿ.ರಾವ್, ತಂಗಮಾರಿಯಪ್ಪನ್ ಮಾತನಾಡಿದರು.

ಸಮಾರಂಭದಲ್ಲಿ ಶಾಲಾ ಮುಖ್ಯಶಿಕ್ಷಕರಾದ ದೀಪಾ ಎಲ್, ಮತ್ತು ಹರೀಶ್ ಹಾಗೂ ರೋಟರಿ ಇನ್ನರ್ ವೀಲ್ ನ ಅಧ್ಯಕ್ಷೆ ಜ್ಯೋತಿ ವಿಶ್ವನಾಥ್ , ಮಾಜಿ ಅಧ್ಯಕ್ಷೆ ಸ್ಮೀತಾದಯಾನಂದ್, ಸುಜಾತ ಸೇರಿದಂತೆ ಸದಸ್ಯರು ಶಿಕ್ಷಕ ವೃಂದ ಹಾಜರಿದ್ದರು. ಮಕ್ಕಳು, ಶಿಕ್ಷಕರು ಒಗ್ಗೂಡಿ ನೃತ್ಯ, ಹಾಡು ಸೇರಿದಂತೆ ಮತ್ತಿತರ ಸಾಮಸ್ಕೃತಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

RELATED ARTICLES
- Advertisment -
Google search engine

Most Popular