Saturday, January 10, 2026
Google search engine

Homeರಾಜಕೀಯಕೃಷಿಸಚಿವರು ದೆಹಲಿಗೆ ತೆರಳುತ್ತಲೇ ಸಿಎಂ ಅಲರ್ಟ್: ತುರ್ತು ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷಿಸಚಿವರು ದೆಹಲಿಗೆ ತೆರಳುತ್ತಲೇ ಸಿಎಂ ಅಲರ್ಟ್: ತುರ್ತು ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಗ್ಯಾರಂಟಿ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ರಣ ರೋಚಕ ಧಾರಾವಾಹಿ ಆರಂಭವಾಗುವ ಎಲ್ಲಾ ಲಕ್ಷಣಗಳು ಗೋಚರಿಸಲಾರಂಭಿಸಿದೆ. ಸಚಿವ ಚಲುವರಾಯಸ್ವಾಮಿ ದೆಹಲಿಗೆ ಹೋಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಳ ಪ್ರಯೋಗಿಸಿದ್ದು ಇಂದು ತುರ್ತು ಕೃಷಿ ಸಚಿವರ ಸಭೆಯನ್ನು ಕರೆದಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಂಬಲಿಸುವ ಸಚಿವರು ಮತ್ತು ಶಾಸಕರು ಶಕ್ತಿ ಪ್ರದರ್ಶನ ಮಾಡಲು ಗುರುವಾರ ದಿಢೀರ್ ದೆಹಲಿಗೆ ಹೋಗಿದ್ದಾರೆ. ಈ ಬಣದ ನಾಯಕತ್ವವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ವಹಿಸಿಕೊಂಡಿದ್ದಾರೆ.

ಚಲುವರಾಯಸ್ವಾಮಿ ದೆಹಲಿಗೆ ಹೋದ ಬೆನ್ನಲ್ಲೇ ಮುಖ್ಯಮಂತ್ರಿಗಳು ಅಲರ್ಟ್ ಆಗಿದ್ದಾರೆ. ಗುರುವಾರ ರಾತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ವಾಸ್ತವ್ಯ ಹೂಡಬೇಕಿತ್ತು. ಆದರೆ ಮುಖ್ಯಮಂತ್ರಿಗಳು ಮೈಸೂರು ವಾಸ್ತವ್ಯವನ್ನು ರದ್ದು ಮಾಡಿದ್ದಾರೆ.

ಇಂದು ಬೆಳಗ್ಗೆ 10.30ಕ್ಕೆ ಕಾವೇರಿ ನಿವಾಸದಲ್ಲಿ ಕೃಷಿ ಸಚಿವರ ಜೊತೆ ಮೆಕ್ಕೆಜೋಳ ಖರೀದಿಸುವ ಸಂಬಂಧ ತುರ್ತು ಸಭೆ ಕರೆದಿದ್ದು ಸೂಚನಾ ಪತ್ರ ಹೊರಡಿಸಿದ್ದಾರೆ.

ಹೆಸರಿಗೆ ಮೆಕ್ಕೆಜೋಳದ ಸಭೆಯನ್ನು ಕರೆದಿದ್ದರೂ ದೆಹಲಿ ಯಾತ್ರೆ ಒಗ್ಗಟ್ಟು ಮುರಿಯಲೆಂದೇ ಈ ಸಿದ್ದರಾಮಯ್ಯ ಈ ತಂತ್ರ ಹೂಡಿದ್ದಾರೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ತುರ್ತು ಸಭೆ ನೆಪದಲ್ಲಿ ಚಲುವರಾಯಸ್ವಾಮಿ ಅವರನ್ನು ಸಮಾಧಾನ ಮಾಡಲು ಸಿದ್ದರಾಮಯ್ಯ ಕಸರತ್ತು ಆರಂಭಿಸಿದ್ದಾರೆ.
ಈಗಾಗಲೇ ಡಿ.ಕೆ.ಶಿವಕುಮಾರ್ ಬಣದ ಬೆಂಬಲಿಗರ ನಾಯಕತ್ವ ಹೊತ್ತಿರುವ ಚಲುವರಾಯ ಸ್ವಾಮಿ ಸಿಎಂ ಮಾತಿಗೆ ಬೆಲೆ ನೀಡಿ ದೆಹಲಿಯಿಂದ ಮತ್ತೆ ಬೆಂಗಳೂರಿಗೆ ಮರಳುತ್ತಾರೋ? ಇಲ್ಲವೋ ಎನ್ನುವ ಕುತೂಹಲ ಹೆಚ್ಚಾಗಿದೆ.

RELATED ARTICLES
- Advertisment -
Google search engine

Most Popular