ಹುಣಸೂರು : ಖಾಸಗಿ ಶಾಲಾ ಕಾಲೇಜು ಶಿಕ್ಷಕ, ಶಿಕ್ಷಕಿ ಮತ್ತು ಕಾಲೇಜು ಉಪನ್ಯಾಸಕರಿಗೆ ಪೋಕ್ಸೋ ಕಾಯ್ದೆಯ ಅರಿವು ಮೂಡಿಸಲು ಸಭೆ ಕರೆಯಲಾಗಿದೆ ಎಂದು ತಾಲೂಕು ಖಾಸಗಿ ಶಾಲೆಯ ಒಕ್ಕೂಟದ ಕಾರ್ಯದರ್ಶಿ ಡಾ.ಹೆಚ್.ಪಿ.ಶ್ರೀನಾಥ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಗರದ ಶಾಸ್ತ್ರೀ ಶಾಲೆಯಲ್ಲಿ ಶನಿವಾರ ಬೆಳಗ್ಗೆ 8.30. ಕ್ಕೆ ಪೋಕ್ಸೊ ಕಾಯ್ದೆ ಬಗ್ಗೆ ತಾಲೂಕಿನ ಎಲ್ಕಾ ಶಾಲಾ ಮತ್ತು ಕಾಲೇಜಿನ ಶಿಕ್ಷಕ, ಶಿಕ್ಷಕಿಯರಿಗೆ, ಉಪನ್ಯಾಸಕರಿಗೆ ಅರಿವಿನ ಶಿಬಿರ ಹಮ್ಮಿಕೊಂಡಿದ್ದು ಪ್ರತಿ ಶಾಲೆಯಿಂದ ಐದು ಶಿಕ್ಷಕರು ಮತ್ತು ಉಪನ್ಯಾಸಕರು ಕಡ್ಡಾಯವಾಗಿ ಭಾಗವಹಿಸಿ ಶಿಬಿರದ ಸದ್ಬಳಕೆ ಮಾಡಿಕೊಳ್ಳಲು ಮನವಿ ಮಾಡಿದ್ದಾರೆ.



