Sunday, November 23, 2025
Google search engine

Homeರಾಜ್ಯಸುದ್ದಿಜಾಲಅಪಾಯಕಾರಿ ಸಾಮಾಗ್ರಿ ಸಾಗಿಸುತ್ತಿದ್ದ ವಾಹನ: ದಂಡ ವಿಧಿಸಿದ ಪೊಲೀಸರು

ಅಪಾಯಕಾರಿ ಸಾಮಾಗ್ರಿ ಸಾಗಿಸುತ್ತಿದ್ದ ವಾಹನ: ದಂಡ ವಿಧಿಸಿದ ಪೊಲೀಸರು

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸಿ ಅಪಾಯಕಾರಿಯಾಗಿ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗಿತ್ತು. ಈ ವಾಹನಕ್ಕೆ ಸಂಚಾರ ನಿಯಮದ ಅನ್ವಯ ಸೂಕ್ತ ದಂಡ ವಿಧಿಸಲಾಗಿದೆ ಎಂದು ಇಂದು ಪ್ರಕಟಣೆಯಲ್ಲಿ ಪೊಲೀಸ್ ಇಲಾಖೆ ತಿಳಿಸಿದೆ.

ದ.ಕ. ಜಿಲ್ಲೆಯ ಠಾಣಾ ವ್ಯಾಪ್ತಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ವಾಹನ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆ, ವಾಹನ ಚಾಲನೆಯ ವೇಳೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಇತರೆ ಅಗತ್ಯ ಮಾಹಿತಿಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RELATED ARTICLES
- Advertisment -
Google search engine

Most Popular