Sunday, November 23, 2025
Google search engine

Homeಅಪರಾಧಬೆಂಗಳೂರು: 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಅಮಾನತು!

ಬೆಂಗಳೂರು: 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಅಮಾನತು!

ವರದಿ :ಸ್ಟೀಫನ್ ಜೇಮ್ಸ್.

ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ಅಮಾನತು ಮಾಡಲಾಗಿದೆ.

 ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ಅಮಾನತು ಮಾಡಲಾಗಿದೆ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಅವರು ಪೇದೆ ಅಣ್ಣಪ್ಪ ನಾಯ್ಕ್ ನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಬೆಂಗಳೂರಿನ ಎಲ್ಲಾ ಪೊಲೀಸ್ ಠಾಣೆಯ ಪಿಎಸ್ಐ, ಎಎಸ್ಐ, ಹೆಡ್ ಕಾನ್ಸ್ಟೇಬಲ್, ಪೇದೆಗಳ ಮಾನಿಟರಿಂಗ್ ಮಾಡುವಂತೆ ಸೂಚಿಸಿದ್ದಾರೆ.

ಸಭೆ ನಡೆಸಿ ರಿಪೋರ್ಟ್ ನೀಡುವಂತೆ ಆಯಾ ವಿಭಾಗದ ಎಸಿಪಿ, ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ CMS ಸಂಸ್ಥೆ ಮಾಜಿ ನೌಕರ ಕ್ಸೇವಿಯರ್, ಗೋವಿಂದಪುರ ಪೊಲೀಸ್ ಠಾಣಾ ಪೇದೆ ಅಣ್ಣಪ್ಪ ನಾಯ್ಕ್, ಹಾಲಿ CMS ಸಂಸ್ಥೆ ಸಿಬ್ಬಂದಿ ಗೋಪಿ, ರವಿ, ಜಿತೇಶ್‌ ಸೇರಿ ಒಟ್ಟು ಏಳು ದರೋಡೆಕೋರರನ್ನ ಬಂಧಿಸಲಾಗಿದ್ದು ಆರೋಪಿಗಳಿಂದ ರೂ.5.7 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

RELATED ARTICLES
- Advertisment -
Google search engine

Most Popular