ಚಿಕ್ಕಬಳ್ಳಾಪುರ: ಅಧಿಕಾರ ಹಂಚಿಕೆ ಕುರಿತು ಭಾರೀ ಚರ್ಚೆಯಾಗುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಹೇಳಿದರೇ ಮುಂದುವರೆಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ.ಕೆ.ಶಿವಕುಮಾರ್ ಒಪ್ಪಬೇಕು ಎಂದು ಹೇಳಿದರು. ಹೈಕಮಾಂಡ್ ನನ್ನನ್ನೇ ಮುಂದುವರೆಸಿ ಅಂತಾ ಹೇಳಿದ್ರೆ ಮುಂದುವರೆಯುತ್ತೇನೆ. ಹೈಕಮಾಂಡ್ ಏನನ್ನ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ಧ. ನಾವೆಲ್ಲರೂ ಹೈಕಮಾಂಡ್ ಹೇಳಿದಂತೆ ನಡೆಯಬೇಕು ಎಂದು ಸ್ಪಷ್ಟಪಡಿಸಿದರು.



