Wednesday, November 26, 2025
Google search engine

Homeಅಪರಾಧಕಾನೂನುಮುರುಘಾ ಶ್ರೀ ನಿರ್ದೋಷಿ : ಕೋರ್ಟ್ ತೀರ್ಪು

ಮುರುಘಾ ಶ್ರೀ ನಿರ್ದೋಷಿ : ಕೋರ್ಟ್ ತೀರ್ಪು

ಚಿತ್ರದುರ್ಗ : ಮುರುಘಾ ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3 ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಮೊದಲ ಪ್ರಕರಣ ಖುಲಾಸೆಯಾಗಿದೆ.

ಪ್ರಕರಣದ ಹಿನ್ನೆಲೆ :

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್ ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

ಅದೇ ವರ್ಷ ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, 2022ರ ಸೆ. 1 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಿನಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಉಲ್ಲೇಖಿಸಿದ್ದರು.

ಈ ವೇಳೆ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ದ ಕೇಸ್ ದಾಖಲಾಗಿದ್ದು, ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾಜ್ ಶೀಟ್ ಸಲ್ಲಿಸಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಿದ್ದರು.

2023ರ ಜ.10ಕ್ಕೆ ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್ ಶೀಟ್ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡೆಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.

2ನೇ ಪೋಕ್ಸೋ ಕೇಸಿನಲ್ಲಿ ಜಾಮೀನು ಪಡೆಯದ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪುನಃ ನ.20ರಂದು ಮಧ್ಯಾಹ್ನ ಮುರುಘಾಶ್ರೀ ಮತ್ತೆ ಬಂಧನಕ್ಕೊಳಗಾದರು. ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆಗ ನ.20 ರ ಸಂಜೆ ವೇಳೆಗೆ ಹೈಕೋರ್ಟ್ ಸೂಚನೆ ಮೇರೆಗೆ ಬಿಡುಗಡೆ ಭಾಗ್ಯ ಸಿಕ್ಕಿತ್ತು.
ಮುರುಘಾ ಶ್ರೀಗಳ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಮುಖ್ಯ ಸಾಕ್ಷಿ ವಿಚಾರಣೆ ಪೂರ್ಣ ಆಗುವವರೆಗೂ ಮುರುಘಾಶ್ರೀ ಬಂಧನದಲ್ಲಿಡುವಂತೆ ಸುಪ್ರಿಂ ಆದೇಶ ಮಾಡಿತ್ತು. ಹೀಗಾಗಿ 2024ರ ಮೇ.27 ರಂದು ಕೋರ್ಟ್ ಎದುರು ಶರಣಾದ ಮುರುಘಾ ಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು. ಬಳಿಕ ಸಂತ್ರಸ್ತೆಯರಿಬ್ಬರು ಸೇರಿದಂತೆ 13 ಜನರ ಸಾಕ್ಷಿ ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ ಸಿಕ್ಕಿತ್ತು.

RELATED ARTICLES
- Advertisment -
Google search engine

Most Popular