Friday, November 28, 2025
Google search engine

Homeರಾಜಕೀಯಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ : ಸಂಸದ ಯದುವೀರ್ ಬೇಸರ

ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ : ಸಂಸದ ಯದುವೀರ್ ಬೇಸರ

ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಸರ ವ್ಯಕ್ತಪಡಿಸಿದರು.

ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್ ನ ಆಂತರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್ ನಾಯಕರೇ ಹೇಳಿದ್ದಾರೆಂದು ತಿಳಿಸಿದರು

ರಾಜ್ಯದ ಜನ ಅವರನ್ನು ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ನಡೆಯಲಿ, ಆದರೆ ರಾಜ್ಯದ ಆಡಳಿತ, ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನು ಮಾಡಲಿ ಎಂದು ಹೇಳಿದರು. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ನಾವು ಕಾಂಗ್ರೆಸ್ ಪಕ್ಷದವರ ಜೊತೆ ಸಂಪರ್ಕದಲ್ಲಿಲ್ಲ. ಮಾಧ್ಯಮದವರೇ ಹೆಚ್ಚು ಮಾಹಿತಿ ನೀಡಬೇಕು ಎಂದರು.

RELATED ARTICLES
- Advertisment -
Google search engine

Most Popular