ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲು, ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಜ್ಯಕ್ಕೆ ಸ್ವಾಗತಿಸಿದರು. ಈ ವೇಳೆ ರೈತರ ಸಮಸ್ಯೆಗಳ ಕುರಿತ ನಮ್ಮ ಮನವಿ ಪತ್ರವನ್ನು ನೀಡಿದ್ದರು.
ಈ ಕುರಿತು ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮುಖಾಂತರ ಮೋದಿ ಅವರು ತಕ್ಷಣ ರಾಜ್ಯದ ರೈತರ ಕಷ್ಟವನ್ನು ಅರ್ಥೈಸಿಕೊಂಡು, ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ತಕ್ಷಣ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ, ಎಥೆನಾಲ್ ಹಂಚಿಕೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ, ರೈತರಿಗೆ ದೊರೆಕಬೇಕಾದ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕೆಂದು ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ನಮ್ಮ ಮನವಿ ಪತ್ರವನ್ನು ಅವರಿಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಧಾನಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಏನಿದೆ ನೋಡುವುದಾದರೆ, ಮೆಕ್ಕೆಜೋಳ ಮತ್ತು ಹೆಸರು ಕಾಳು ಬೆಳೆಗಳ ತೀವ್ರ ಬೆಲೆ ಕುಸಿತದಿಂದ ಕರ್ನಾಟಕದ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಈ ಹಿನ್ನೆಲೆಯಲ್ಲಿ ಬೆಂಬಲ ಬೆಲೆಯಲ್ಲಿ ರೈತರ ಬೆಳೆಗಳನ್ನು ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಸಿಎಂ ಸಿದ್ದರಾಮಯ್ಯ ಅವರು ಬರೆದಿರುವ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಚಿವ ದಿನೇಶ್ ಗುಂಡೂರಾವ್ ಸಲ್ಲಿಸಿದ್ದಾರೆ.
ಕರ್ನಾಟಕವು ಮೆಕ್ಕೆಜೋಳವನ್ನು ತನ್ನ ಪಿಡಿಎಸ್ (ಸಾರ್ವಜನಿಕ ವಿತರಣಾ ವ್ಯವಸ್ಥೆ) ವಿತರಣೆಯಲ್ಲಿ ಸೇರಿಸದ ಕಾರಣ, ರೈತರಿಗೆ ಬೆಲೆ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಿಲ್ಲ. ಹಾಗಾಗಿ, FCI, NAFED ಮತ್ತು ಸೂಕ್ತ ಮಾರುಕಟ್ಟೆ ಮಧ್ಯಸ್ಥಿಕೆ ಕಾರ್ಯವಿಧಾನದ ಅಡಿಯಲ್ಲಿ ತಕ್ಷಣವೇ MSP ಯಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳಿನ ಸಂಗ್ರಹಣೆಯನ್ನು ಪ್ರಾರಂಭಿಸಲು ನಿರ್ದೇಶನ ನೀಡಬೇಕು ಎಂದಿದ್ದಾರೆ.
ಎಥನಾಲ್ ಪೂರೈಕೆಯಲ್ಲಿ ರಾಜ್ಯದ ರೈತರ ಭಾಗವಹಿಸುವಿಕೆ ಖಚಿತಪಡಿಸಿಬೇಕು:
ಮೆಕ್ಕೆಜೋಳದಿಂದ ಉತ್ಪಾದಿಸುವ ಎಥನಾಲ್‌ಗೆ ಮೂಲ ದರ ಲೀಟರ್‌ಗೆ ₹66.07 ಆಗಿದೆ, ಮತ್ತು ಮೆಕ್ಕೆಜೋಳದಿಂದ ಪಡೆಯುವ ಎಥನಾಲ್‌ಗೆ ಲೀಟರ್‌ಗೆ ಹೆಚ್ಚುವರಿ ₹5.79 (GST ಹೊರತುಪಡಿಸಿ) ಪ್ರೋತ್ಸಾಹಧನವನ್ನು ಪಾವತಿಸಬೇಕು. ಆದಾಗ್ಯೂ, ಕರ್ನಾಟಕದ ಅನೇಕ ಎಥನಾಲ್ ಘಟಕಗಳು ರೈತರನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿ ಮಧ್ಯವರ್ತಿಗಳು ಮತ್ತು ವ್ಯಾಪಾರಿಗಳಿಂದ ಮೆಕ್ಕೆಜೋಳವನ್ನು ಖರೀದಿಸುತ್ತಿರುವುದು ಕಂಡುಬಂದಿದೆ. ಇದು MSP ಯ ಮತ್ತು ಕೃಷಿಕರಿಗೆ ಪ್ರಯೋಜನ ನೀಡಲು ಉದ್ದೇಶಿಸಿರುವ ಕೇಂದ್ರ ಸರ್ಕಾರದ ಪ್ರೋತ್ಸಾಹಕ ರಚನೆಯ ಉದ್ದೇಶವನ್ನು ಸೋಲಿಸುತ್ತದೆ. ಕೇಂದ್ರ ಸರ್ಕಾರವು ಎಥನಾಲ್ ಘಟಕಗಳಿಗೆ ರೈತರಿಂದ ಅಥವಾ ರೈತ-ಉತ್ಪಾದಕ ಸಂಸ್ಥೆಗಳಿಂದ (FPO) ನೇರವಾಗಿ ಮೆಕ್ಕೆಜೋಳವನ್ನು ಸಂಗ್ರಹಿಸಲು ನಿರ್ದೇಶಿಸಬೇಕು. ನೇರ ಸಂಗ್ರಹಣೆಯನ್ನು ಖಚಿತಪಡಿಸದಿದ್ದರೆ, ಎಥನಾಲ್ ಉತ್ಪಾದಕರಿಗೆ ನೀಡುವ ಪ್ರೋತ್ಸಾಹಕವನ್ನು ಮರುಪರಿಶೀಲಿಸಬೇಕು.
ಕರ್ನಾಟಕದ ರೈತರು ದೇಶದ ಆಹಾರ ಭದ್ರತೆ, ಎಥನಾಲ್ ಸಾಮರ್ಥ್ಯ ವಿಸ್ತರಣೆ ಮತ್ತು ಆರ್ಥಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ. ನ್ಯಾಯಯುತ ಸಂಗ್ರಹಣೆ ಮತ್ತು ಸಮಾನ ಎಥನಾಲ್ ಹಂಚಿಕೆಯನ್ನು ಖಚಿತಪಡಿಸುವುದು ಅವರ ಹಕ್ಕು ಮಾತ್ರವಲ್ಲ, ಅದು ರಾಷ್ಟ್ರದ ಜವಾಬ್ದಾರಿಯಾಗಿದೆ ಎಂದಿದ್ದಾರೆ. ಕರ್ನಾಟಕದಲ್ಲಿ ರೈತರ ತೀವ್ರ ಸಂಕಷ್ಟವನ್ನು ತಪ್ಪಿಸಲು ಮತ್ತು ನಮ್ಮ ರಾಷ್ಟ್ರದ ಕೃಷಿ ಬೆನ್ನೆಲುಬಾದವರ ಬದುಕನ್ನು ಸುಸ್ಥಿರವಾಗಿಡಲು ಮಾನ್ಯ ಪ್ರಧಾನಿಗಳು ಮನಸ್ಸು ಮಾಡಬೇಕಾಗಿ, ರೈತರ ಹಿತ ಕಾಯಬೇಕಾಗಿ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.



