Tuesday, January 13, 2026
Google search engine

Homeರಾಜ್ಯರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ : ಚಿರತೆ ಸಾವು

ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ : ಚಿರತೆ ಸಾವು

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೂರು ವರ್ಷದ ಚಿರತೆ ಮರಿ ರಸ್ತೆ ದಾಟುತ್ತಿದ್ದ ವೇಳೆ ಹಿಟ್ ಆಂಡ್ ರನ್ ಮಾಡಿಕೊಂಡು ಬಂದ ವಾಹನ ಸವಾರರು, ನಿಧಾನವಾಗಿ ಚಲಿಸಬೇಕಾಗಿದ್ದ ವಾಹನ ಅರಣ್ಯಪ್ರದೇಶದಲ್ಲಿ ಜೋರಾಗಿ ಹೋಗಿ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಚಿರತೆ ಮುಖಕ್ಕೆ ಗಂಭೀರವಾಗಿ ಗಾಯವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದೆ.

ಘಟನೆಯ ಬಳಿಕ ಶಿಗ್ಗಾಂವಿ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪರಿಚಿತ ವಾಹನದ ಪತ್ತೆಗಾಗಿ ಇಲಾಖೆ ಸಿಬ್ಬಂದಿ, ಪೊಲೀಸರು ಶೋಧ ನಡೆಸುತ್ತಿದ್ದಾರೆ. ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

RELATED ARTICLES
- Advertisment -
Google search engine

Most Popular