Tuesday, December 2, 2025
Google search engine

Homeರಾಜ್ಯಸುದ್ದಿಜಾಲಹಳಿಯೂರು ಗ್ರಾ.ಪಂ ಗಾಂಧಿಗ್ರಾಮ ಪುರಸ್ಕಾರಕ್ಕೆ ಭಾಜನ

ಹಳಿಯೂರು ಗ್ರಾ.ಪಂ ಗಾಂಧಿಗ್ರಾಮ ಪುರಸ್ಕಾರಕ್ಕೆ ಭಾಜನ

ವರದಿ : ವಿನಯ್ ದೊಡ್ಡಕೊಪ್ಪಲು

ಕೆ.ಆ‌ರ್. ನಗರ : ಸಾಲಿಗ್ರಾಮ ತಾಲೂಕಿನ ಹಳಿಯೂರು ಗ್ರಾಪಂಗೆ 2023-24ನೇ ಸಾಲಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಲಾಯಿತು. ಬೆಂಗಳೂರಿನ ವಿಧಾನಸೌಧದ ಆಡಳಿತ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಂಚಾ ಯಿತಿ ಅಧ್ಯಕ್ಷೆ ಡಿ.ಜೆ. ರೇಖಾ ಜಗದೀಶ್ ಮತ್ತು ಪಿಡಿಒ ಚಿದಂಬರ್‌ಅವರಿಗೆ ಪ್ರಶಸ್ತಿ ವಿತರಿಸಿದರು.

ಸಾಲಿಗ್ರಾಮ ತಾಲೂಕಿನ 19 ಗ್ರಾಪಂಗಳ ಪೈಕಿ ಹಳಿಯೂರು ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದ್ದು, ಈ ಸಂದರ್ಭದಲ್ಲಿ ಸಚಿವರು 5 ಲಕ್ಷ ನಗದು ಮತ್ತು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಹಳಿ ಯೂರು ಗ್ರಾಮ ಪಂಚಾಯಿತಿ ಆಡಳಿ ತ ವ್ಯವಸ್ಥೆ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಅಗತ್ಯ ಮೂಲಭೂತ ಸವಲತ್ತುಗಳನ್ನು ನಾಗರೀಕರಿಗೆ ಸಲ್ಲಿಸುವುದನ್ನು ಮನಗಂಡ ಸರ್ಕಾರ ಪಂಚಾಯಿತಿಗೆ ಸರ್ಕಾರ ಪುರಸ್ಕಾರ ನೀಡಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಅಭಿನಂದನೆ

ಗ್ರಾಪಂ ಗಾಂಧಿಗ್ರಾಮ ಪುರಸ್ಕಾರಕ್ಕೆ ಭಾಜನರಾಗಿರುವುರಿಂದ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular