Tuesday, December 2, 2025
Google search engine

Homeರಾಜ್ಯಸ್ಮಾರ್ಟ್ ಮೀಟರ್ ಟೆಂಡರ್ ಹಗರಣ : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದಾಖಲಾಗಿದ್ದ ದೂರು ರದ್ದು

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದಾಖಲಾಗಿದ್ದ ದೂರು ರದ್ದು

ಬೆಂಗಳೂರು : ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರು ಸಲ್ಲಿಸಿದ್ದ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಹೈಕೋರ್ಟ್ ಪೀಠವು ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಜಾರ್ಜ್ ಅವರ ಜೊತೆಗೆ, ಇಂಧನ ಇಲಾಖೆಯ ಗೌರವ್ ಗುಪ್ತ, ಬೆಸ್ಕಾಂನ ಮಹಾಂತೇಶ ಬೀಳಗಿ ಹಾಗೂ ಹೆಚ್.ಜೆ. ರಮೇಶ್ ವಿರುದ್ಧದ ಪ್ರಕರಣಗಳನ್ನೂ ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣದ ಹಿನ್ನೆಲೆ ನೋಡುವುದಾದರೆ, ಸ್ಮಾರ್ಟ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪನಿಗಾಗಿ ಇತರೆ ಕಂಪನಿಗಳು ಟೆಂಡರ್ ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬೇರೆ ರಾಜ್ಯಗಳಲ್ಲಿ 900 ರೂ.ಗೆ ಸಿಗುವ ಸ್ಮಾರ್ಟ್ ಮೀಟರ್ ನ್ನು 5 ಸಾವಿರದಿಂದ 10 ಸಾವಿರ ರೂ.ಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಆರೋಪಿಸಲಾಗಿತ್ತು.

ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂ. ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್ ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5,296 ಕೋಟಿ ರೂ.ಗೆ ನೀಡಲಾಗಿರುವ ಟೆಂಡರ್ ನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ.

ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್ ಡಿಎಸ್ ಎಸ್ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ನ್ನು 5 ಸಾವಿರದಿಂದ 8,800 ರೂ.ಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು.

RELATED ARTICLES
- Advertisment -
Google search engine

Most Popular