Friday, December 5, 2025
Google search engine

Homeರಾಜ್ಯಸುದ್ದಿಜಾಲದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ

ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 75 ವರ್ಷದ ದಾನೇಶ್ವರ ಸ್ವಾಮೀಜಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯವರನ್ನು ನಾಲ್ಕು ದಿನಗಳ ಹಿಂದೆ ಅವರನ್ನು ಬೆಳಗಾವಿಯ ಕೆಎಲ್‌ಇ (KLE) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟೆ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸ್ವಾಮೀಜಿ ಅಪಾರ ಭಕ್ತರನ್ನು ಹೊಂದಿದ್ದು, ಸ್ವಾಮೀಜಿಯ ನಿಧನದ ಸುದ್ದಿ ಹಿನ್ನಲೆ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ದಾಸೋಹದ ಮೂಲಕವೇ ಹೆಸರುವಾಸಿಯಾಗಿದ್ದ ಶ್ರೀಗಳು ಇತ್ತೀಚೆಗೆ ಬಂಡಿಗಣಿಯಲ್ಲಿ ಸರ್ವಧರ್ಮ ಸಮಾವೇಶವನ್ನು ಸಹ ಆಯೋಜಿಸಿದ್ದರು.

ಸಂಜೆ 4 ಗಂಟೆಗೆ ಶ್ರೀಗಳ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

ಭಕ್ತರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದ್ದು, ಪಾರ್ಥಿವ ಶರೀರ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಿಂದ  ಸ್ವಾಮೀಜಿಯ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಸವದಿ ಗ್ರಾಮಕ್ಕೆ ತಲುಪಲಿದೆ. ಅಲ್ಲಿ ಅಂತಿಮ ದರ್ಶನ ಬಳಿಕ ಬಂಡಿಗಣಿ ಮಠಕ್ಕೆ ರಾತ್ರಿ 10 ಗಂಟೆಗೆ ಆಗಮಿಸಲಿದೆ. ರಾತ್ರಿ 10 ರಿಂದ ನಾಳೆ (ಶನಿವಾರ) ಸಂಜೆ 4 ಗಂಟೆಯವರೆಗೆ ಭಕ್ತರಿಗೆ ಮಠದ ಆವರಣದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ

RELATED ARTICLES
- Advertisment -
Google search engine

Most Popular