Friday, December 12, 2025
Google search engine

Homeರಾಜಕೀಯಕಾಂಗ್ರೆಸ್ ಪಕ್ಷ ಇರೋದೆ ಹಿಂದೂ ನಾಯಕರನ್ನ ಟಾರ್ಗೆಟ್ ಮಾಡಲು: ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್ ಪಕ್ಷ ಇರೋದೆ ಹಿಂದೂ ನಾಯಕರನ್ನ ಟಾರ್ಗೆಟ್ ಮಾಡಲು: ಛಲವಾದಿ ನಾರಾಯಣಸ್ವಾಮಿ

ಬೆಳಗಾವಿ : ಕರ್ನಾಟಕ ವಿಧಾನ ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷ ಹಿಂದೂ ನಾಯಕರನ್ನು ಟಾರ್ಗೆಟ್ ಮಾಡುವುದಕ್ಕಾಗಿಯೇ ಇದೆ ಎಂದು ಆರೋಪಿಸಿದ್ದಾರೆ ಹಾಗೂ ದ್ವೇಷ ಭಾಷಣದ ಹೆಸರಲ್ಲಿ ಹಿಂದುತ್ವ ಮತ್ತು ಹಿಂದೂ ನಾಯಕರನ್ನು ಹಣಿಯುವ ತೀರ್ಮಾನವನ್ನು ಕಾಂಗ್ರೆಸ್ ಕೈಗೊಂಡಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತ ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಘರ್ಷಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ ಎನ್ನಲಾಗಿದೆ. ಬೆಳಗಾವಿಯಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್​ನವರು ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್​ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಕಾರ್ಯಕರ್ತರು ಸಂದೇಶಗಳನ್ನು ಹಾಕಿದರೆ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿ ಬಂಧನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಿಂದೂ ಕಾರ್ಯಕರ್ತರು ಮೆಸೇಜ್ ಹಾಕಿದ್ರೇ, ಪೊಲೀಸರೇ ದೂರು ತೆಗೆದುಕೊಂಡು ಅರೆಸ್ಟ್ ಮಾಡಿದ ನಿದರ್ಶನಗಳಿವೆ. ಆದರೆ ಕಾಂಗ್ರೆಸ್ ವಿರುದ್ಧ ದೂರು ಕೊಟ್ಟರೆ ಎಫ್‌ಐಆರ್ ಆಗಲ್ಲ, ಅರೆಸ್ಟ್ ಆಗಲ್ಲ ಎಂದು ಕಿಡಿ ಕಾರಿದ್ದಾರೆ ಹಾಗೂ ಇದು ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಯನ್ನು ಬಯಲು ಮಾಡುತ್ತದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ದ್ವೇಷ ಭಾಷಣದ ಆರೋಪಗಳು ಹೆಚ್ಚಾಗಿವೆ. ಇದು ಬಿಜೆಪಿ ನಾಯಕರು ಮತ್ತು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಉದಾಹರಣೆಗೆ, ಸಾಮಾಜಿಕ ಜಾಲತಾಣಗಳಲ್ಲಿ ಹಿಂದುತ್ವಕ್ಕೆ ಸಂಬಂಧಿಸಿದ ಪೋಸ್ಟ್‌ಗಳು ಅಥವಾ ಕಾಮೆಂಟ್‌ಗಳನ್ನು ಹಾಕಿದರೆ ತಕ್ಷಣ ದೂರು ದಾಖಲಾಗುತ್ತದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಆದರೆ ಕಾಂಗ್ರೆಸ್ ನಾಯಕರ ವಿರುದ್ಧದ ದೂರುಗಳು ಕಡೆಗಣನೆಗೊಳಗಾಗುತ್ತವೆ ಎಂದು ಛಲವಾದಿ ಉದಾಹರಣೆಗಳೊಂದಿಗೆ ವಿವರಿಸಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ.

ಇನ್ನೂ ಛಲವಾದಿ ನಾರಾಯಣಸ್ವಾಮಿ ಈ ವೇಳೆ ಮೀಸಲಾತಿ ವಿಷಯವನ್ನೂ ಪ್ರಸ್ತಾಪಿಸಿದ್ದು, ಈ ಸರ್ಕಾರ ಒಳ ಮೀಸಲಾತಿ ತರ್ತೇವಿ ಅಂತಾ ಹೇಳಿದ್ದರೂ, ಆದರೆ ಒಳ ಮೀಸಲಾತಿ ಯಾವ ಆಧಾರದ ಮೇಲೆ ಕೊಟ್ರೂ ಅನ್ನೋ ಪ್ರಶ್ನೆ ಇದೆ. ಆಗಾಗಿ ಸಂಪೂರ್ಣವಾದ ಮೀಸಲಾತಿ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ತರುವ ಬಗ್ಗೆ ದೀರ್ಘಕಾಲದಿಂದ ಚರ್ಚೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದರೂ, ಈಗ ವಿಳಂಬವಾಗುತ್ತಿರುವುದು ಸಮುದಾಯಗಳಲ್ಲಿ ಅಸಮಾಧಾನ ಮೂಡಿಸಿದೆ. ಮೀಸಲಾತಿ ಪರವಾಗಿ ಸಭೆ ಮಾಡ್ತಿದಾರೆ, ಒತ್ತಡ ಹಾಕ್ತಿದಾರೆ. ಆದರೆ ಸರ್ಕಾರ ತಲೆ ಕೆಡಸಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರ ಪ್ರಕಾರ, ಕಾಂಗ್ರೆಸ್ ಸರ್ಕಾರ ಹಿಂದುತ್ವವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ ಹಿಂದು ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂಬ ಆರೋಪಗಳು ಹೆಚ್ಚುತ್ತಿವೆ. ಉದಾಹರಣೆಗೆ, ಲವ್ ಜಿಹಾದ್, ಧರ್ಮಾಂತರ ವಿರೋಧಿ ಕಾನೂನುಗಳು ಮತ್ತು ಇತರ ಹಿಂದುತ್ವ ಸಂಬಂಧಿತ ವಿಷಯಗಳಲ್ಲಿ ಸರ್ಕಾರದ ನಿಲುವು ವಿವಾದಾಸ್ಪದವಾಗಿದೆ ಎಂದು ಛಲವಾದಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular