Wednesday, December 17, 2025
Google search engine

Homeರಾಜ್ಯಸುದ್ದಿಜಾಲ15 ವರ್ಷ ಮೀರಿದ ವಾಹನಗಳು ಗುಜುರಿಗೆ, ಸರ್ಕಾರದಿಂದ ಅನುಮೋದನೆ: ಸಚಿವ ರಾಮಲಿಂಗಾರೆಡ್ಡಿ.

15 ವರ್ಷ ಮೀರಿದ ವಾಹನಗಳು ಗುಜುರಿಗೆ, ಸರ್ಕಾರದಿಂದ ಅನುಮೋದನೆ: ಸಚಿವ ರಾಮಲಿಂಗಾರೆಡ್ಡಿ.

ವರದಿ :ಸ್ಟೀಫನ್ ಜೇಮ್ಸ್.

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿದೆ.

ಬೆಳಗಾವಿ: ದೆಹಲಿಯಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ವಾಹನಗಳ ಗುಜರಿ ನೀತಿ ಇದೀಗ ಕರ್ನಾಟಕದಲ್ಲೂ ಗಂಭೀರವಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆಯಲ್ಲಿದೆ.

ಹೌದು..ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ ಹದಿನೈದು (15) ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ ವೆಹಿಕಲ್ ಸ್ಕ್ರ್ಯಾಪಿಂಗ್ ಫೆಸಿಲಿಟಿ (Registered Vehicle Scrapping Facility) ಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರಕಾರವು ಕಳೆದ ಸೆಪ್ಡೆಂಬರ್ 12ರಂದು ಅನುಮೋದನೆ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಇಂದು ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ದಿನಾಂಕ: 04-12-2025ರ ಅಂತ್ಯಕ್ಕೆ ಒಟ್ಟು 18,552 ಹದಿನೈದು (15) ವರ್ಷಗಳು ಮೀರಿದ (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರಕಾರವು ವಾಹನ್ ಪೊರ್ಟಲಿನಲ್ಲಿ ರದ್ದುಪಡಿಸಲಾಗಿದೆ. ಈ 18,552 ವಾಹನಗಳ ಪೈಕಿ ಆರ್ ವಿಎಸ್ ಎಫ್ (Registered Vehicle Scrapping Facility) ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಮತ್ತು 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದು ತಿಳಿಸಿದರು.

2023ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3212 ವಾಹನಗಳು ನಿಷ್ಕ್ರೀಯಗೊಂಡಿವೆ. 579 ವಾಹನಗಳನ್ನು ನಿಷ್ಕ್ರೀಯಗೊಳಿಸಲು ಬಾಕಿ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.

ಬೌದ್ಧ ಭಿಕ್ಕುಗಳಿಗೆ ಮಾಸಿಕ ವೇತನ

ಇದೇ ವೇಳೆ ರಾಜ್ಯ ಬೌದ್ಧ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೌದ್ಧ ಭಿಕ್ಕುಗಳಿಗೆ ಮುಜರಾಯಿ ಇಲಾಖೆ ವತಿಯಿಂದ ತತಕ್ಷಣದಿಂದಲೇ ಅನ್ವಯವಾಗುವಂತೆ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ತಿಂಗಳ ವೇತನವನ್ನು ನೀಡಲಾಗುವುದು ರಾಮಲಿಂಗಾರೆಡ್ಡಿ ತಿಳಿಸಿದರು.

ಪ್ರಶ್ನೋತ್ತರ ವೇಳೆ ಶಿವಕುಮಾರ್‌.ಕೆ ಅವರು ಕೇಳಿದ ಪ್ರಶ್ನೆಗೆ ವಕ್ಫ್ ಮತ್ತು ಅಲಸಂಖ್ಯಾತ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಅವರ ಪರವಾಗಿ ಉತ್ತರಿಸಿದ ರಾಮಲಿಂಗಾರೆಡ್ಡಿ ಅವರು, ರಾಜ್ಯದ ನಾನಾ ಕಡೆ ಬೌದ್ಧ ಕೇಂದ್ರಗಳಲ್ಲಿ ಬೌದ್ಧ ಭಿಕ್ಕುಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲವು ಕಡೆ ಕೆಲವರಿಗೆ ದೈನಂದಿನ ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಇಲಾಖೆ ವತಿಯಿಂದಲೇ ಅವರಿಗೆ ಮಾಸಿಕ ವೇತನ ನೀಡುವುದಾಗಿ ತಿಳಿಸಿದರು.

ಈ ಸಂಬಂಧ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ತತಕ್ಷಣದಿಂದಲೇ ಜಾರಿಯಾಗುವಂತೆ ವೇತನ ನೀಡಲಾಗುವುದು. ಸರ್ಕಾರ ಅವರ ಹಿತ ಕಾಪಾಡಲು ಬದ್ಧವಿದೆ ಎಂದು ಆಶ್ವಾಸನೆ ನೀಡಿದರು.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ನೊಂದಾಯಿತ ಜೈನ ಬಸದೀಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅರ್ಚಕರಿಗೆ 6000, ಸಹಾಯಕ ಅರ್ಚಕರಿಗೆ 5000 ರೂ. ಇದೇ ರೀತಿ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್‌, ಇಮಾಮ್‌ ಮತ್ತು ಮುಯಿಜೀನ್‌ ಅವರುಗಳಿಗೆ ಕ್ರಮವಾಗಿ ಕ್ರಮವಾಗಿ 6 ಸಾವಿರ ಹಾಗೂ 5000 ನೀಡುತ್ತಿದ್ದೇವೆ ಎಂದು ವಿವರಿಸಿದರು.

RELATED ARTICLES
- Advertisment -
Google search engine

Most Popular