ಮಹಾತ್ಮಗಾಂಧಿ ಹೆಸರಿನಲ್ಲಿ ಜಾರಿಗೆ ಬಂದಿದ್ದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಘೋರ ಅಪರಾಧವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ಶುಕ್ರವಾರ ಬೆಳಗ್ಗೆ ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಯುಪಿಎ ಸರ್ಕಾರ ಇದ್ದಾಗ
ಈ ಯೋಜನೆ ಸಮಾಜದ ಬಡ, ರೈತ, ಕಾರ್ಮಿಕ ವರ್ಗಕ್ಕೆ ಮನರೇಗಾ ಕಾರ್ಯಕ್ರಮದಿಂದ ಅನುಕೂಲವಾಗಿದೆ. ಇದೀಗ ಮಹಾತ್ಮ ಗಾಂಧಿ ಹೆಸರನ್ನು ಕೈಬಿಡುವ ಮೂಲಕ ಅಪಮಾನ ಮಾಡಲಾಗಿದೆ. ಈಗಾಗಲೇ ಮಹಾತ್ಮಗಾಂಧಿ ವಿರುದ್ಧ ಸಂಘ ಪರಿವಾರದ ಶಕ್ತಿಗಳಿಂದ ನಡೆಯುತ್ತಿರುವ ಮಹಾತ್ಮಗಾಂಧಿ ವಿರುದ್ಧದ ಅವಹೇಳನದ ಭಾಗ ಇದಾಗಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರಂ ಶಶಿಧರ ಹೆಗ್ಡೆ, ಅಶ್ರಫಂ ಕೆ.ಇ., ಬ್ಲಾಕ್ ಅಧ್ಯಕ್ಷರಾದ ಬಿ.ಎಲ್.ಪದ್ಮನಾಭ ಕೋಟ್ಯಾನ್, ಪ್ರಕಾಶ್ ಸಾಲ್ಯಾನ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಡೆನ್ನಿಸ್ ಡಿಸಿಲ್ವಾ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮಂಜುಳಾ ನಾಯಕ್, ಮಹಿಳಾ ಮುಂಚೂಣಿ ಘಟಕದ ನಗರ ಅಧ್ಯಕ್ಷೆ ಅಪ್ಪಿ, ಡಿಸಿಸಿ ಉಪಾಧ್ಯಕ್ಷ ಶುಭೋದಯ ಆಳ್ವ, ಪ್ರಧಾನ ಕಾರ್ಯದರ್ಶಿ ಜಯಶೀಲ ಅಡ್ಯಂತಾಯ, ಟಿ.ಕೆ.ಸುಧೀರ್, ದಿನೇಶ್ ಮೂಳೂರ್, ಸಮರ್ಥ್ ಭಟ್, ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.



