Monday, December 22, 2025
Google search engine

Homeಆರೋಗ್ಯ20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ 5...

20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಡಿ, 22: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಚಳಿ ಕಂಡಿದೆ. ನಿನ್ನೆ ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಇಂದು ಕಲಬುರಗಿ, ಬೀದರ್ ಸರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ವಿಜಯಪುರದಲ್ಲಿ ನಿನ್ನೆ(ಡಿ.21) 6.9 ಡಿಗ್ರಿ ಸೆಲ್ಸಿಯಲ್ಸ್ ಉಷ್ಣಾಂಶ ದಾಖಲಾಗಿತ್ತು.ಕಳೆದ 20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿದೆ. ಅಂತೆಯೇ ಇಂದೂ ಉತ್ತರ ಕರ್ನಾಟಕದೆಲ್ಲೆಡೆ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊಂದಿಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 14°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ.

RELATED ARTICLES
- Advertisment -
Google search engine

Most Popular