Friday, December 26, 2025
Google search engine

Homeಸಿನಿಮಾಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು : ನಟ ಶಿವರಾಜ್‌ ಕುಮಾರ್

ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು : ನಟ ಶಿವರಾಜ್‌ ಕುಮಾರ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ವ್ಯಾಪಕವಾಗಿರುವ ಅಭಿಮಾನಿಗಳ ಫ್ಯಾನ್ಸ್ ವಾರ್ ಕುರಿತು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕನ್ನಡ ಚಿತ್ರರಂಗದ ಸ್ಟಾರ್ ಹೀರೋಗಳಾದ ದರ್ಶನ್ ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಜೋರಾಗಿದ್ದು, ಈ ಬಗ್ಗೆ ಸ್ವತಃ ನಟ ಸುದೀಪ್ ಸ್ಪಷ್ಟನೆ ಕೊಟ್ಟಿದ್ದರೂ ಅಭಿಮಾನಿಗಳ ನಡುವಿನ ಸಂಘರ್ಷ ಮಾತ್ರ ಕಡಿಮೆಯಾಗಿಲ್ಲ. ಈ ಫ್ಯಾನ್ಸ್ ವಾರ್ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್ ನಟ-ನಟಿಯರು, ನಿರ್ದೇಶಕರು ಮಾತನಾಡಿದ್ದು ಫ್ಯಾನ್ಸ್ ವಾರ್ ಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಈ ನಡುವೆ ಫ್ಯಾನ್ಸ್ ವಾರ್ ಕುರಿತು ನಟ ಶಿವರಾಜ್ ಕುಮಾರ್ ಮಾತನಾಡಿದ್ದು, ನಾವೆಲ್ಲರೂ ಅನ್ಯೋನ್ಯವಾಗಿ ಹೊಂದಿಕೊಂಡು ಇರಬೇಕು ಎಂದು ಹೇಳಿದ್ದರಲ್ಲದೇ ‘45’ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು. ಯಾರ ಭಾವನೆಗಳ ಜೊತೆಗೂ ಆಟ ಆಡಬಾರದು. ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಅಂತೆಯೇ ಎಲ್ಲರೂ ಬದುಕೋಣ, ಬದುಕೋಕೆ ಬಿಡೋಣ ಎಂಬ ಭಾವನೆ ಎಲ್ಲರಿಗೂ ಇರಬೇಕು. ಸಮಾಜ ಇಷ್ಟೇ. ನಾವು ಎಷ್ಟು ದಿನ ಇರುತ್ತೇವೆ? ಅಷ್ಟು ದಿನ ನಾವೆಲ್ಲರೂ ಅನ್ಯೋನ್ಯವಾಗಿ ಹೊಂದಿಕೊಂಡು ಇರಬೇಕು ಎಂದು ಶಿವರಾಜ್​ಕುಮಾರ್ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular