ದಾವಣಗೆರೆ : ಮುಖ್ಯಮಂತ್ರಿ ಹುದ್ದೆಗೆ ಭಾರೀ ಪೈಪೋಟಿ ನಡೆಯುತ್ತಿದೆ ಎಂಬ ಪ್ರಶ್ನೆ ಕೇಳುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರ ವಿರುದ್ಧವೇ ಗರಂ ಆಗಿದ್ದು, ನಗರದ ಎಂಬಿಎ ಮೈದಾನದ ಹೆಲಿಪ್ಯಾಡ್ ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದಲ್ಲಿ ಬರೀ ಸಿಎಂ ಕುರ್ಚಿದ್ದೇ ಚರ್ಚೆ. ಇದಕ್ಕೆ ಮುಕ್ತಿ ಇಲ್ಲವೇ ಸರ್, ‘ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಿಮಗೆ ದಿನ ಬೆಳಗಾದರೆ ಸಿಎಂ ಕುರ್ಚಿ ಬಿಟ್ಟರೆ, ಬೇರೆ ಸುದ್ದಿಗಳು ಇಲ್ಲವೇ ಎಂದು ಮಾಧ್ಯಮದವರ ವಿರುದ್ಧವೇ ಗರಂ ಆಗಿದ್ದಾರೆ.
ಅಂತಿಮವಾಗಿ ನಮ್ಮದು ಹೈಕಮಾಂಡ್ ಪಕ್ಷ. ಸಿಎಂ ಬದಲಾವಣೆ ಮಾಡಬೇಕಿರುವುದು ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಸದ್ಯ ಸಿಎಂ ಬದಲಾವಣೆಯ ಸನ್ನಿವೇಶಗಳು ಇಲ್ಲ ಎಂದು ತಿಳಿಸಿದರು.
ಡಿ.ಕೆ.ಶಿವಕುಮಾರ್ ಅವರ ಹೊಸದಿಲ್ಲಿ ಪ್ರವಾಸ ಕುರಿತ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ಅವರು ತಮ್ಮ ಇಲಾಖೆ ವಿಚಾರಕ್ಕೆ ದಿಲ್ಲಿಗೆ ಹೋಗಿದ್ದಾರೆ. ಅವರು ಹೈಕಮಾಂಡ್ ಭೇಟಿ ಆಗಿಲ್ಲ ಎಂದರು.



