Monday, December 29, 2025
Google search engine

Homeಅಪರಾಧಕಾನೂನುಮರ್ಯಾದಾ ಹತ್ಯೆ ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ ಸಿಎಂ ಸಿದ್ದರಾಮಯ್ಯ

ಮರ್ಯಾದಾ ಹತ್ಯೆ ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಸ್ವತ ತಂದೆಯೇ 6 ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ರಾಜ್ಯದಲ್ಲಿ ಮರ್ಯಾದಾ ಹತ್ಯೆ  ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಕಳೆದ ರಾತ್ರಿ ಗ್ರಾಮದಲ್ಲಿ ಜಿಲ್ಲಾಡಳಿತ ಶಾಂತಿ ಸಭೆ ಕೂಡ ಮಾಡಿದೆ.

ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣ ರಾಜ್ಯ ಮತ್ತು ದೇಶದಲ್ಲಿ ದೊಡ್ಡ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ತರಬೇಕು ಅಂತ ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿದ್ದವು. ಆದರೆ ಇದೀಗ ರಾಜ್ಯ ಸರ್ಕಾರ ಕೂಡ ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಕಳೆದ ರಾತ್ರಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮರ್ಯಾದೆ ಹತ್ಯೆ ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಕೇವಲ ಕಾನೂನು ಜಾರಿಗೊಳಿಸಿದರೆ ಸಾಲದು, ಅದನ್ನು ಅನುಷ್ಠಾನಕ್ಕೆ ತರುವ ಕೆಲಸವಾಗಬೇಕು ಅಂತ ಹೇಳಿದ್ದಾರೆ.

ಡಿಸೆಂಬರ್ 21ರಂದು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಬರ್ಬರ ಕೊಲೆಯಾಗಿತ್ತು. ಮಗಳು ಪ್ರೀತಿಸಿ ದಲಿತ ಸಮುದಾಯದ ಯುವಕನನ್ನು ಮದುವೆಯಾಗಿದ್ದಕ್ಕೆ ಸ್ವತ ತಂದೆಯೇ 6 ತಿಂಗಳ ಗರ್ಭಿಣಿಯನ್ನು ಕೊಲೆ ಮಾಡಿದ್ದ. ಈ ಘಟನೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿತ್ತು. ಒದಂಡೆ ಪ್ರೀತಿಸಿ ಮದುವೆಯಾಗಿದ್ದ ಮಾನ್ಯಾಳ ಬರ್ಬರ ಹತ್ಯೆಯಾಗಿದ್ದರೆ, ಮದುವೆಯಾಗಿದ್ದ ವಿವೇಕನಾಂದ ಕುಟುಂಬದ ಮೇಲೆ ಕೂಡ ದುಷ್ಕರ್ಮಿಗಳು ಅಟ್ಟಹಾಸ ಮೆರದಿದ್ದರು. ಘಟನೆ ನಡೆದು ಎಂಟು ದಿನವಾದರು ಕೂಡ ಗ್ರಾಮದಲ್ಲಿ ಭಯದ ವಾತಾವರಣ ಕಡಿಮೆಯಾಗಿರಲಿಲ್ಲ.

ಇನ್ನು ಆಸ್ಪತ್ರೆಯಲ್ಲಿ ಅನೇಕ ದಿನಗಳ ಕಾಲ ಚಿಕಿತ್ಸೆ ಪಡೆದು ಚೇತರಿಸಿಕೊಂಡರು ಕೂಡ ವಿವೇಕಾನಂದ ಕುಟುಂಬ, ಮರಳಿ ಇನಾಂವೀರಾಪುರ ಗ್ರಾಮಕ್ಕೆ ಹೋಗಲು ಹಿಂದೇಟು ಹಾಕಿತ್ತು. ತಮಗೆ ಗ್ರಾಮದಲ್ಲಿ ಪ್ರಾಣಭಯವಿದೆ ಅಂತ ಆತಂಕ ವ್ಯಕ್ತಪಡಿಸಿತ್ತು. ಇನ್ನು ಘಟನೆ ನಡೆದು ಎಂಟು ದಿನವಾದರು ಕೂಡ ಜಿಲ್ಲಾಡಳಿತ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ, ಸರ್ವಧರ್ಮ ಮತ್ತು ಜಾತಿಗಳ ನಡುವೆ ಸಮನ್ವಯತೆ, ಶಾಂತಿ ಕಾಪಾಡುವ ಕೆಲಸಕ್ಕೆ ಮುಂದಾಗಿರಲಿಲ್ಲ.ನಂತರ ಧಾರವಾಡ ಜಿಲ್ಲಾಡಳಿತ ಕಳೆದ ರಾತ್ರಿ ಇನಾಂವೀರಾಪುರ ಗ್ರಾಮದಲ್ಲಿ ಶಾಂತಿ ಸಭೆ ಮಾಡಿದೆ.

ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಶಾಂತಿ ಸಭೆ ಮಾಡಿದೆ. ಎಲ್ಲಾ ಜಾತಿ ಮತ್ತು ಧರ್ಮದವರನ್ನು ಸೇರಿಸಿ, ಶಾಂತಿ ಮತ್ತು ಸೌಹಾರ್ದ ಸಭೆಯನ್ನು ನಡೆಸಿ, ಗ್ರಾಮದಲ್ಲಿ ಎಲ್ಲರು ಕೂಡಿ ಬಾಳುವಂತೆ ಸೂಚನೆ ನೀಡಲಾಗಿದೆ.

ಇನ್ನು ಗ್ರಾಮಸ್ಥರು ಕೂಡ ಆಗಿರುವ ಘಟನೆಯನ್ನು ಮರೆತು, ಶಾಂತಿ ಮತ್ತು ಸಹಬಾಳ್ವತೆ ಯಿಂದ ಬದುಕೋದಾಗಿ ಅಧಿಕಾರಿಗಳಿಗೆ ಭರವಸೆ ನೀಡಿದ್ದಾರೆ. ಗ್ರಾಮಕ್ಕೆ ಹೋಗಲು ಹಿಂದೇಟು ಹಾಕಿದ್ದ ವಿವೇಕಾನಂದ ಕುಟುಂಬವನ್ನು ಗ್ರಾಮಕ್ಕೆ ಕರೆಸಿ, ಅವರಿಗೆ ಧೈರ್ಯ ತುಂಬಿ, ಅವರ ಮನೆಗೆ ಕಳುಹಿಸಲಾಗಿದೆ. ಇನ್ನು ಮರ್ಯಾದೆ ಹತ್ಯೆಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಇಂದು ಕೂಡ ಅನೇಕ ದಲಿತ ಪರಸಂಘಟನೆಗಳು ಪ್ರತಿಭಟನೆ ಮಾಡಿದ್ದಾರೆ.

ರಾಜ್ಯದಲ್ಲಿ ಮರ್ಯಾದೆ ಹತ್ಯೆಗಳನ್ನು ತಡೆಯಲು ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಲು ಮುಂದಾಗಿದೆ. ಆದರೆ ಕಾನೂನು ಒಂದಡೆ ಕೆಲಸ ಮಾಡಿದರೆ, ಜನರ ಮನಸಲ್ಲಿ ಉಳಿದಿರುವ ಜಾತಿ ವ್ಯವಸ್ಥೆಯನ್ನು ತೊಲಗಿಸುವ ಕೆಲಸ ಮೊದಲು ಆಗಬೇಕಿದೆ.

RELATED ARTICLES
- Advertisment -
Google search engine

Most Popular