ಚಿಕ್ಕಮಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.
ಚಿಕ್ಕಮಗಳೂರು ಜಿಲ್ಲಾಡಳಿತವು ಜಿಲ್ಲೆಯ ಪ್ರಸಿದ್ಧ 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ. ಹೊಸ ವರ್ಷದ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸಂಚಾರ ದಟ್ಟಣೆ ಮತ್ತು ಅಹಿತಕರ ಘಟನೆಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಗಿರಿ, ಗಾಳಿಕೆರೆ, ಕೆಮ್ಮಣ್ಣುಗುಂಡಿ, ಕ್ಯಾತನಮಕ್ಕಿ, ರುದ್ರಪಾದ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೆಬ್ಬೆ ಜಲಪಾತ, ಡೈಮಂಡ್ ಫಾಲ್ಸ್, ಬಂಡಾಜೆ ಫಾಲ್ಸ್, ಕೂಡಿಗೆ ಫಾಲ್ಸ್, ಅಬ್ಬುಗುಡಿಗೆ ಫಾಲ್ಸ್, ಎತ್ತಿನಭುಜ, ದೇವರಮನೆ, ಬಳ್ಳಾಳರಾಯನ ದುರ್ಗಕ್ಕೆ ನಿರ್ಬಂಧ ವಿಧಿಸಲಾಗಿದೆ.



