Thursday, January 1, 2026
Google search engine

Homeರಾಜ್ಯKSRTC ಸೇರಿ ನಾಲ್ಕು ನಿಗಮಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭ

KSRTC ಸೇರಿ ನಾಲ್ಕು ನಿಗಮಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ಇಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ದರ್ಜೆ-3ರ ಮೇಲ್ವಿಚಾರಕೇತರ ಮತ್ತು ದರ್ಜೆ-4ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿದೆ.

2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯು ಇಂದು ಬೆಳಿಗ್ಗೆ 11 ಗಂಟೆಯಿಂದ ಪ್ರಾರಂಭವಾಗಿದ್ದು, ಜ.31ರ ಸಂಜೆ 5.30ರ ವರೆಗೆ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೌಕರರಿಗೆ ಆನ್‌ಲೈನ್‌ ಮೂಲಕ ಅವಕಾಶ ನೀಡಲಾಗಿದೆ.

ಸಾಮಾನು ವರ್ಗಾವಣೆ, ಪತಿ-ಪತ್ನಿ/ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ವಿಕಲ ಚೇತನ ನೌಕರರು/ತೀವ್ರ ತರಹದ ಅನಾರೋಗ್ಯ ಹೊಂದಿರುವ ನೌಕರರು ಮತ್ತು ಪರಸ್ಪರ ವರ್ಗಾವಣೇಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌‍ಆರ್‌ಟಿಸಿಯ ವರ್ಗಾವಣೆ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್‌ಐವಿ, ಹೃದಯರೋಗ, ಕ್ಯಾನ್ಸರ್‌, ಸ್ಪೈನಲ್‌ಕಾರ್ಡ, ಕಿಡ್ನಿ ವೈಫಲ್ಯ, ಮೆದುಳಿಗೆ ಸಂಬಂಧಿಸಿದ ರೋಗಳನ್ನು ತೀವ್ರ ತರಹದ ಅನಾರೋಗ್ಯವೆಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ.

RELATED ARTICLES
- Advertisment -
Google search engine

Most Popular