ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ: ಕೆಎಲ್‌ಎಸ್ ಗೊಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (KLS-GIT), ಬೆಳಗಾವಿಯಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ (ಬಿಇ) ದ್ವಿತೀಯ ವರ್ಷದ ವಿದ್ಯಾಭ್ಯಾಸ ನಡೆಸುತ್ತಿರುವ ಕು. ನಿವೆದಿತಾ ಬಿ. ಇಂಗಳಗಿ ಅವರು ಹಾಕಿ ಕ್ರೀಡೆಯಲ್ಲಿ ಮಹತ್ವದ ಸಾಧನೆ ಮಾಡಿ ಯುನಿವರ್ಸಿಟಿ ಬ್ಲೂ (University Blue) ಗೌರವಕ್ಕೆ ಆಯ್ಕೆಯಾಗಿದ್ದಾರೆ.
ವಿಶ್ವವಿದ್ಯಾಲಯ ಮಟ್ಟದಲ್ಲಿ ಅತ್ಯುತ್ತಮ ಕ್ರೀಡಾಪಟುಗಳಿಗೆ ನೀಡಲಾಗುವ ಈ ಗೌರವಕ್ಕೆ ನಿವೆದಿತಾ ಆಯ್ಕೆಯಾಗಿರುವುದು ಕಾಲೇಜು, ನಗರ ಹಾಗೂ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಈ ಆಯ್ಕೆಯೊಂದಿಗೆ ನಿವೆದಿತಾ ಇಂಗಳಗಿ ಅವರು ತಮ್ಮ ತಂಡದ ಸಹ ಆಟಗಾರರೊಂದಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಕರ್ನಾಟಕ ತಂಡವನ್ನು ಪ್ರತಿನಿಧಿಸಿ ತಮಿಳುನಾಡಿನಲ್ಲಿ ನಡೆಯಲಿರುವ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆVTU ಕರ್ನಾಟಕ ಹಾಕಿ ತಂಡಕ್ಕೆ ಬೆಳಗಾವಿ ಜಿಲ್ಲೆಯಲ್ಲಿಂದ ಆಯ್ಕೆಯಾದ ಏಕೈಕ ಮಹಿಳಾ ಆಟಗಾರ್ತಿ ನಿವೆದಿತಾ ಇಂಗಳಗಿ ಆಗಿದ್ದಾರೆ. ಇದು ಅವರ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಭ್ಯಾಸ ಹಾಗೂ ಕ್ರೀಡೆಯ ಮೇಲಿನ ಅಸಾಧಾರಣ ಆಸಕ್ತಿಗೆ ಸಾಕ್ಷಿಯಾಗಿದೆ.ಅಧ್ಯಯನದ ಜೊತೆಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ನಿವೆದಿತಾ ಅವರ ಈ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಧ್ಯಾಪಕರು, ಕ್ರೀಡಾ ವಿಭಾಗದ ತರಬೇತುದಾರರು ಹಾಗೂ ಸಹ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನಿವೆದಿತಾ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸೋಣವೇ



