Monday, January 12, 2026
Google search engine

Homeದೇಶಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಇಡಿ

ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಕಲ್ಲಿದ್ದಲು ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ I-PAC ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ನಡೆದ ತನಿಖೆ ಮತ್ತು ಶೋಧ ಕಾರ್ಯಾಚರಣೆಯ ವೇಳೆ ಮೂವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬೆದರಿಕೆ ಮತ್ತು ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.

ಕೋಲ್ಕತ್ತಾ ಐ-ಪಿಎಸಿ ಕಚೇರಿಯಲ್ಲಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಮುಖ್ಯಮಂತ್ರಿಯ ವಿರುದ್ಧ ಈ ಅರ್ಜಿ ಸಲ್ಲಿಸಲಾಗಿದ್ದು, ಕಾರ್ಯಾಚರಣೆಯಲ್ಲಿದ್ದ ಮೂವರು ಇಡಿ ಅಧಿಕಾರಿಗಳು ಈ ಅರ್ಜಿ ಸಲ್ಲಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆ, ಇಡಿ ಸಲ್ಲಿಸಿರುವ ಅರ್ಜಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಇತರ ಹಲವರ ವಿರುದ್ಧ ಗಂಭೀರ ಆರೋಪಗಳನ್ನ ಸಹ ಮಾಡಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಡಿಜಿಪಿ ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದೆ.

ಜನವರಿ 8 ರಂದು ಸುಮಾರು 2,742 ಕೋಟಿ ರೂ.ಗಳ ಕಲ್ಲಿದ್ದಲು ಹಗರಣದಲ್ಲಿ ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಕ್ಕಾಗಿ ಸಿಬಿಐ ಎಫ್‌ಐಆರ್ ದಾಖಲಿಸಿ ಬ್ಯಾನರ್ಜಿ, ಡಿಜಿಪಿ ರಾಜೀವ್ ಕುಮಾರ್ ಮತ್ತು ಸಿಪಿ ಮನೋಜ್ ವರ್ಮಾ ಅವರ ವಿರುದ್ಧ ತನಿಖೆ ನಡೆಸಬೇಕೆಂದು ಅದು ಒತ್ತಾಯಿಸಿದೆ.

ಅಲ್ಲದೆ ಟಿಎಂಸಿ ಬೆಂಬಲಿಗರು ಹೈಕೋರ್ಟ್ ಕಲಾಪವನ್ನ ಹೈಜಾಕ್ ಮಾಡಲು ಪ್ರಯತ್ನಿಸಿದರು. ಟಿಎಂಸಿ ಬೆಂಬಲಿಗರು ಹೈಕೋರ್ಟ್ ವಿಚಾರಣೆಗೆ ಮುನ್ನ ವಾಟ್ಸಾಪ್ ಗುಂಪುಗಳ ಮೂಲಕ ಪೂರ್ವಯೋಜಿತ ಗೊಂದಲ ಸೃಷ್ಟಿಸಿದ್ದರು.

ಜನವರಿ 8 ರಂದು ಸುಮಾರು 2,742 ಕೋಟಿ ರೂ. ಕಲ್ಲಿದ್ದಲು ಹಗರಣದಲ್ಲಿ ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ರಾಜೀವ್ ಕುಮಾರ್ ಮತ್ತು ಸಿಪಿ ಮನೋಜ್ ವರ್ಮಾ ಅವರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂದು ಇಡಿ ಒತ್ತಾಯಿಸಿದ್ದು, ಈ ಅರ್ಜಿಗೆ ಪೂರಕವಾಗಿ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿ, ರಾಜ್ಯದ ವಾದಗಳಿಲ್ಲದೇ ಯಾವುದೇ ಆದೇಶವನ್ನು ಹೊರಡಿಸದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದೆ.

ಇಡಿ ದಾಳಿಗಳನ್ನು ಐ-ಪಿಎಸಿ ಟೀಕಿಸಿದ್ದು, ತನಿಖಾ ಸಂಸ್ಥೆಯು ಅಶಾಂತಗೊಳಿಸುವ ಪೂರ್ವನಿದರ್ಶನವನ್ನು ಸ್ಥಾಪಿಸಿದೆ ಎಂದು ಹೇಳಿದೆ. ಆದಾಗೀಯೂ, ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದೆ.

RELATED ARTICLES
- Advertisment -
Google search engine

Most Popular