Tuesday, January 13, 2026
Google search engine

Homeಅಪರಾಧಆನೆದಾಳಿಗೆ ಮಹಿಳೆ ಸಾವು: ಸಚಿವ ಈಶ್ವರ ಖಂಡ್ರೆ ಸಂತಾಪ

ಆನೆದಾಳಿಗೆ ಮಹಿಳೆ ಸಾವು: ಸಚಿವ ಈಶ್ವರ ಖಂಡ್ರೆ ಸಂತಾಪ

ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿ ಆನೆಯನ್ನು ಮರಳಿ ಕಾಡಿಗೆ ಮರಳಿಸಲು ಅಥವಾ ಆನೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುವ ಅವರು, ಕೂಡಲೇ ಸ್ಥಳಕ್ಕೆ ತೆರಳಿ, ಪರಿಸ್ಥಿತಿ ನಿಭಾಯಿಸುವಂತೆ ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರತಿಯೊಂದು ಜೀವವೂ ಅಮೂಲ್ಯ, ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಆಕಸ್ಮಿಕವಾಗಿ ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಆಸರೆಯಾಗಲು ನಿಯಮಾನುಸಾರ ಪರಿಹಾರ ನೀಡುವಂತೆಯೂ ತಿಳಿಸಿದ್ದಾರೆ.

ವನ್ಯಜೀವಿಗಳಿಂದ ಮಾನವ ಜೀವ ಹಾನಿ ಸಂಭವಿಸದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಆನೆಗಳ ಸಂಚಾರದ ಬಗ್ಗೆ ಸ್ಥಳೀಯರಿಗೆ ಎಚ್ಚರಿಕೆ ಸಂದೇಶ ರವಾನಿಸಲು ಮತ್ತು ಆನೆ ಕಾರ್ಯಪಡೆ ಸಿಬ್ಬಂದಿಯನ್ನು ನಿಯೋಜಿಸಲೂ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

RELATED ARTICLES
- Advertisment -
Google search engine

Most Popular