ಬೆಂಗಳೂರು: ಸಿವಿಲ್ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಇದೀಗ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದು, ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅಬ್ದುಲ್ ಸಲೀಂ, ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರಿಗೆ ಶೈಲು ಶಿಕ್ಷೆ ವಿಧಿಸಿದ್ದಾರೆ.
ಇನ್ನೂ ಈ ಪ್ರಕರಣದಲ್ಲಿ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯವು ಮಧ್ಯಂತರ ಆದೇಶವನ್ನು ನೀಡಿತ್ತು. ಆದರೆ ಪ್ರತಿವಾದಿಯಾದ ರಾಕೇಶ್ ಶೆಟ್ಟಿ ಅವರು ಈ ಆದೇಶವನ್ನು ಉಲ್ಲಂಘಿಸಿ, ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದ್ದು, ಈ ಹಿನ್ನೆಲೆ ರಾಕೇಶ್ ಶೆಟ್ಟಿ ಅವರು ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.



