Wednesday, January 14, 2026
Google search engine

Homeರಾಜ್ಯವಾಲ್ಮೀಕಿ ಹಗರಣ: ಬಂಧನ ಭೀತಿಯಿಂದ ನಾಗೇಂದ್ರಗೆ ಜಾಮೀನು

ವಾಲ್ಮೀಕಿ ಹಗರಣ: ಬಂಧನ ಭೀತಿಯಿಂದ ನಾಗೇಂದ್ರಗೆ ಜಾಮೀನು

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ಆದೇಶ ಹೊರಡಿಸಿದೆ.

ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ ಬಳಿಕ ಬಂಧನ ಭೀತಿಯಲ್ಲಿದ್ದ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ (ಜ.13) ವಿಚಾರಣೆ ನಡೆಸಿದ್ದ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಬುಧವಾರಕ್ಕೆ (ಜ.14) ಆದೇಶ ಕಾಯ್ದಿರಿಸಿತ್ತು. ಅದರಂತೆ ಇದೀಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

RELATED ARTICLES
- Advertisment -
Google search engine

Most Popular