Saturday, January 17, 2026
Google search engine

Homeರಾಜಕೀಯಅಸ್ಸಾಂ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ, ಆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾದ ಅಲೆಯಿದೆ :...

ಅಸ್ಸಾಂ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ, ಆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾದ ಅಲೆಯಿದೆ : ಡಿಕೆಶಿ

ನವದೆಹಲಿ: ಅಸ್ಸಾಂ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. ಖಂಡಿತವಾಗಿ ಅಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿದೆ. ಆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾದ ಅಲೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಗ್ಗೆ ನವದೆಹಲಿಯಲ್ಲಿ ಅಸ್ಸಾಂ ವಿಧಾನಸಭೆ ಚುನಾವಣೆ ಕುರಿತು ನಡೆದ ಸಭೆಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆಲ್ಲರಿಗೂ ಚುನಾವಣೆ ನಿರ್ವಹಣೆ ಮಾಡಿ ಅನುಭವವಿದೆ. ನಾವೆಲ್ಲರೂ ಒಟ್ಟಾಗಿ ಅಸ್ಸಾಂನಲ್ಲಿ ಬದಲಾವಣೆಗಾಗಿ ಕೆಲಸ ಮಾಡುತ್ತೇವೆ‌. ಅಲ್ಲಿನ ಜನರ ಅಭಿಲಾಷೆಯೂ ಇದೇ ಆಗಿದೆ ಅಲ್ಲದೆ ಗ್ಯಾರಂಟಿಯಾಗಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದಿದ್ದಾರೆ.

ಇನ್ನೂ ಅಸ್ಸಾಂ ರಾಜ್ಯದಲ್ಲಿ ಪಕ್ಷದ ನಾಯಕತ್ವ ವಹಿಸಿಕೊಂಡಿರುವವರು ಯುವಕರು. ಇಲ್ಲಿನ ಎಲ್ಲಾ ನಾಯಕರು ಬೆಂಬಲ ನೀಡುತ್ತಿದ್ದಾರೆ. ನಮ್ಮ ಒಗ್ಗಟ್ಟು ಸ್ಪಷ್ಟ ಸಂದೇಶವನ್ನು ನೀಡಿದೆ.‌ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಪಕ್ಷ ಮುನ್ನಡೆಯಲಿದೆ ಎಂದರು. ಅಲ್ಲದೆ ಭೂಪೇಶ್ ಬಘೇಲ್ ಅವರು ಯಾವ ಕಾರ್ಯತಂತ್ರಗಳನ್ನು ಚುನಾವಣೆಯಲ್ಲಿ ಅನುಸರಿಸಬೇಕು ಎಂದು ಸಲಹೆಗಳನ್ನು ನೀಡಿದ್ದಾರೆ.

ಜೊತೆಗೆ ಸಭೆಯಲ್ಲಿ ಸಾಕಷ್ಟು ನಾಯಕರು ತಮ್ಮ ಆಲೋಚನೆಗಳನ್ನು ತಿಳಿಸಿದ್ದು, ಪಕ್ಷದ ಪದಾಧಿಕಾರಿಗಳು ಅಸ್ಸಾಂನ ಪ್ರಸ್ತುತ ಸ್ಥಿತಿಯ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular