Wednesday, January 21, 2026
Google search engine

Homeರಾಜ್ಯಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ನೇಮಕ ಮಾಡಿದ ಬಿಜೆಪಿ

ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ನೇಮಕ ಮಾಡಿದ ಬಿಜೆಪಿ

ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಚುನಾವಣೆಗೆ ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ಬಿಜೆಪಿ ನೇಮಕ ಮಾಡಿದೆ.

ಇದೇ ಜೂನ್ 30ರೊಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದ್ದು, ಉಸ್ತುವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶಿಸಿದ್ದಾರೆ.

ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದ್ದು, ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯ ಕಣವಾಗಿ ನೋಡುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ದೆಹಲಿಯ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ ನಂತರ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷದ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದಾರೆ.

ಇನ್ನೂ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ.

ಈ ಹಿಂದೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು. ಇದರಿಂದ ಗೊಂದಲಗಳು ಸೃಷ್ಟಿಯಾಗಿತ್ತು. ನಂತರ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಸಭೆ ನಡೆಸಿ, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಿವುದಾಗಿ ಘೋಷಣೆ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular