Wednesday, January 21, 2026
Google search engine

Homeರಾಜ್ಯಸುದ್ದಿಜಾಲಮಲೆಮಹದೇಶ್ವರ ಬೆಟ್ಟಕ್ಕೆ 4 ದಿನಗಳ ಕಾಲ ಪಾದಯಾತ್ರೆಗೆ ನಿರ್ಬಂಧ: ಅರಣ್ಯ ಅಧಿಕಾರಿಗಳ ಆಜ್ಞೆ

ಮಲೆಮಹದೇಶ್ವರ ಬೆಟ್ಟಕ್ಕೆ 4 ದಿನಗಳ ಕಾಲ ಪಾದಯಾತ್ರೆಗೆ ನಿರ್ಬಂಧ: ಅರಣ್ಯ ಅಧಿಕಾರಿಗಳ ಆಜ್ಞೆ

ಚಾಮರಾಜನಗರ : ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್​ ಮೃತ ದುರ್ದೈವಿಯಾಗಿದ್ದು, ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ ಸಲ್ಲಿಸಿ ತೆರಳುವಾಗ ಚಿರತೆ ದಾಳಿ ನಡೆಸಿದೆ.  ಪಾದಯಾತ್ರೆ ಹೊರಟಿದ್ದ ಐವರು  ತೆರಳುವಾಗ ತಡೆಗೋಡೆ ಮೇಲೆ ಕುಳಿತಿದ್ದ ಚಿರತೆ ನೋಡಿ ಬೆಚ್ಚಿ ಬಿದ್ದಿದ್ದಿದ್ದಾರೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದ. ತಡೆಗೋಡೆಯಿಂದ ಕೆಳಗೆ ಬಿದ್ನಾ, ಇಲ್ಲ ಚಿರತೆ ದಾಳಿ ಮಾಡಿದೆಯಾ? ಎಂಬ ಅನುಮಾನ ಆರಂಭದಲ್ಲಿ ಮೂಡಿತ್ತು. ಆದರೆ ಅಂತಿಮವಾಗಿ ಚಿರತೆ ದಾಳಿಗೆ ಆತ ಬಲಿಯಾಗಿರೋದು ದೃಢಪಟ್ಟಿದೆ.

ತಾಳಬೆಟ್ಟದ ಕಂದಕದಲ್ಲಿ ಪ್ರವೀಣ್ ಶವ ಪತ್ತೆಯಾಗಿದ್ದು, ಮಾದಪ್ಪನ ಭಕ್ತನ ಕೊಂದ ನರಭಕ್ಷಕ ಚಿರತೆ ಆತನ ರಕ್ತ ಹೀರಿದೆ. ಸುಮಾರು 1 ಕಿ.ಮೀ. ಕಾಡಿನೊಳಗೆ ಚಿರತೆ ಶವ ಎಳೆದುಕೊಂಡು ಹೋಗಿದ್ದು, ಶವ ಪತ್ತೆ ವೇಳೆಯೂ ಪ್ರವೀಣ್ ಮೃತದೇಹದ ಪಕ್ಕದಲ್ಲೇ ಕುಳಿತಿತ್ತು. ಹೀಗಾಗಿ ಶವ ಹೊರತೆಗೆಯಲು ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಅಂತಿಮವಾಗಿ ಪಟಾಕಿ ಸಿಡಿಸಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಓಡಿಸಿದ್ದು, ಸದ್ಯ ಮರಣೋತ್ತರ ಪರೀಕ್ಷೆಗಾಗಿ ಹನೂರು ಆಸ್ಪತ್ರೆಗೆ ಶವ ರವಾನೆ ಮಾಡಲಾಗಿದೆ. ಬೆಳಗಿನ ಜಾವ 5.30ಕ್ಕೆ ತೆರಳುವಂತೆ ನಮಗೆ ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದರು. ನಾವು 6 ಗಂಟೆ ವೇಳೆಗೆ ಹೋಗುತ್ತಿದ್ದ ವೇಳೆ ಚಿರತೆ ಕಾಣಿಸಿದ್ದು, ಸ್ಥಳದಿಂದ ಓಡಲು ಆರಂಭಿಸಿದ್ದೆವು. ಚಿರತೆ ಚಿರತೆ ಎಂದು ಕಿರುಚಾಡಿದ್ದೆವು ಎಂದು ಪ್ರತ್ಯಕ್ಷದರ್ಶಿಯೋರ್ವರು ತಿಳಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತ ಪ್ರವೀಣ್ ಬಲಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ 4 ದಿನಗಳ ಕಾಲ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಅರಣ್ಯಾಧಿಕಾರಿಗಳು ಆದೇಶಿಸಿದ್ದಾರೆ. ಚಿರತೆ ಹಿಡಿಯುವವರೆಗೆ 4 ದಿನಗಳ ಕಾಲ ಪಾದಯಾತ್ರೆ ನಿರ್ಬಂಧ ಇರಲಿದೆ ಎಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ. ತಾಳಬೆಟ್ಟ ಪ್ರದೇಶದಲ್ಲಿ ಚಿರತೆ ಕೆಲ ದಿನಗಳ ಹಿಂದೆಯೂ ಕಾಣಿಸಿಕೊಂಡಿತ್ತು. ರಸ್ತೆಯ ಬದಿಯಲ್ಲೇ ಇರುವ ಸೇತುವೆ ಮೇಲೆ ಚಿರತೆ ಗಂಟೆಗಟ್ಟಲೆ ಕುಳಿತ ದೃಶ್ಯವನ್ನು ಭಕ್ತರು ಮೊಬೈಲ್​​ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲೇ ಆಗಮಿಸುವುದರಿಂದ ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಗೆ ಮನವಿಯನ್ನೂ ಸಲ್ಲಿಸಲಾಗಿತ್ತು.

RELATED ARTICLES
- Advertisment -
Google search engine

Most Popular