ರಾಜ್ಯಪಾಲರು ಸರ್ಕಾರದ ಭಾಷಣವನ್ನಲ್ಲ, ತಮ್ಮದೇ ಭಾಷಣದ ಒಂದು ವಾಕ್ಯವನ್ನು ಓದಿದ್ದಾರೆ. ಇದು ಪ್ರತಿನಿಧಿ ಸಭೆಗೆ ಮಾಡಿದ ಅವಮಾನ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಮಾತನಾಡುವ ಬದಲು, ಅವರು ಸ್ವತಃ ಸಿದ್ಧಪಡಿಸಿದ ಭಾಷಣವನ್ನು ಮಾಡಿದ್ದಾರೆ, ಇದು ಭಾರತೀಯ ಸಂವಿಧಾನದ ನಿಬಂಧನೆಗಳಿಗೆ ವಿರುದ್ಧವಾದದ್ದು, ಇದು ಭಾರತೀಯ ಸಂವಿಧಾನದ 176 ಮತ್ತು 163 ನೇ ವಿಧಿಯನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತದೆ. ಇನ್ನೂ ರಾಜ್ಯಪಾಲರ ಈ ನಡೆಯ ವಿರುದ್ಧ ನಾವು ಪ್ರತಿಭಟಿಸಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕು. ಆರ್ಟಿಕಲ್ 176 ಸ್ಪಷ್ಟವಾಗಿ ಹೇಳುತ್ತದೆ ರಾಜ್ಯಪಾಲರ ಅವರು ತಯಾರು ಮಾಡುವಂತದಹದು ಓದುವಂತಹದು ಅಲ್ಲ, ಕ್ಯಾಬಿನೆಟ್ ಏನು ತಯಾರು ಮಾಡುತ್ತದೆ ಅದನ್ನ ಓದಲೇಬೇಕು ಎಂದು ತಿಳಿಸಿದ್ದಾರೆ.
ಜಂಟಿ ಅಧಿವೇಶನ ಜೊತೆಗೆ ವಿಶೇಷ ಅಧಿವೇಶನ ಕರಿದಿದ್ವಿ. ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನ ತಗೆದು, ಜಿ ರಾಮಜೀ ಹೊಸ ಕಾಯ್ದೆ ಮಾಡಿದ್ದಾರೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೊಧವಿದೆ. ಒಂದು ಮಹತ್ಮಾ ಗಾಂಧಿಜೀ ಅವರ ಹೆಸರು ತೆಗೆದುಹಾಕಿದ್ದಕ್ಕೆ ಹಳ್ಳಿಗಾಡನಲ್ಲಿ ಇರುವಂತಹ ಬಡ ಕಾರ್ಮಿಕರಿಗೆ ಕನಿಷ್ಠ 100 ದಿನ ಉದ್ಯೋಗ ಕೊಡಬೇಕು ಎಂಬುದು ಈ ಹಿಂದೆ ಮಾಡಿದ್ದರು, ಇದರಲ್ಲಿ ಉದ್ಯೋಗ ಕೊಡುತ್ತಿವೆ ಎಂಬುವುದು ಖಾತ್ರಿ ಇಲ್ಲ. ಮೊದಲು ಅವರ ಜಮೀನಿನಲ್ಲಿ ಕೆಲಸ ಮಾಡಬಹುದಿತ್ತು, ಇದರಲ್ಲಿ ಎಲ್ಲಿ ಕೆಲಸ ಮಾಡಬೇಕು ಎಂದು ಕೇಂದ್ರ ಸರ್ಕಾರ ಹೇಳುತ್ತದೆ ಎಂದರು.
ಇನ್ನೂ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ರಾಜ್ಯಪಾಲ ಗೆಹ್ಲೋಟ್ ಸಂವಿಧಾನದ ಪ್ರಕಾರ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿಲ್ಲ. ಈ ವರ್ತನೆಯ ವಿರುದ್ಧ ನಾವು ಪ್ರತಿಭಟಿಸುತ್ತೇವೆ, ಅವರ ನಡವಳಿಕೆಯ ಕುರಿತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಬೇಕೆ ಎಂದು ಸರ್ಕಾರ ಪರಿಶೀಲಿಸುತ್ತದೆ ಎಂದರು.
ರಾಜ್ಯಪಾಲರು ಇಂದು ವಿಶೇಷ ಅಧಿವೇಶನ ಆರಂಭದಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಲು ಸದನಕ್ಕೆ ಆಗಮಿಸಿ ಕೇವಲ ಒಂದೇ ವಾಕ್ಯದಲ್ಲಿ ಭಾಷಣ ಮಾಡಿ ಮುಗಿಸಿ ನಿರ್ಗಮಿಸಿದ ನಡೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರದ ಸಚಿವರು, ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರದಲ್ಲಿ ಮೋದಿ ಸರ್ಕಾರ ವಿರುದ್ಧ ಟೀಕೆಗಳನ್ನು ಒಳಗೊಂಡಿರುವ ಕಾಂಗ್ರೆಸ್ ಸರ್ಕಾರ ರಚಿಸಿದ ಭಾಷಣದ ಪ್ಯಾರಾಗಳನ್ನು ಕೈಬಿಡದಿದ್ದರೆ, ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದಿಲ್ಲ ಎಂದು ರಾಜ್ಯಪಾಲ ಗೆಹ್ಲೋಟ್ ಮಾತನಾಡಲು ನಿರಾಕರಿಸಿದ್ದಾರೆ.
ಇಂದಿನಿಂದ ವಿಶೇಷ ಅಧಿವೇಶನ ಶುರುವಾಗಲಿದ್ದು, ಅಧಿವೇಶದಲ್ಲಿ ಆಡಳಿರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಿಬಿ ಜಿ ರಾಮ್ ಜಿ ಯೋಜನೆ ವಿಚಾರಕ್ಕೆ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಇದರ ನಡುವೆ ಜಂಟಿ ಅಧಿವೇಶನದಲ್ಲಿ ಭಾಷಣ ಓದಲು ರಾಜಪಾಲ ಥಾವರಚಂದ್ ಗೆಹ್ಲೋಟ್ ನಿರಾಕರಿಸಿದ್ದು, ಸರ್ಕಾರ ಮತ್ತು ಲೋಕಭವನದ ಸಂಘರ್ಷಕ್ಕೆ ದಾರಿ ನಡುವೆ ಮಾಡಿಕೊಟ್ಟಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ ಎನ್ನಲಾಗಿದೆ.



