Thursday, January 22, 2026
Google search engine

Homeರಾಜ್ಯಮುಡಾ ಪ್ರಕರಣ : ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

ಮುಡಾ ಪ್ರಕರಣ : ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

ಬೆಂಗಳೂರು/ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು(ಜ.22) ಮಹತ್ವದ ಆದೇಶ ಪ್ರಕಟಿಸಲಿದೆ.

ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ.ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ-ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದ್ದು, ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ.

ಇತ್ತ ಲೋಕಾಯುಕ್ತ ಅಂತಿಮ ವರದಿ ನೀಡಿದ್ದು, ಆದೇಶ ಹೊರಬೀಳಲಿದೆ. ಇದಕ್ಕೂ ಮುನ್ನ ವಿಚಾರಣೆ ನಡೆಸಿದ್ದ ಕೋರ್ಟ್, ಈ ಹಿಂದೆ ಲೋಕಾಯುಕ್ತ ಪೊಲೀಸರು ಸಾಕಷ್ಟು ದೋಷಾರೋಪ ಪಟ್ಟಿ ಹಾಕಿದ್ದಾರೆ. ಆದರೆ ಯಾಕೆ ಅಂತಿಮ ವರದಿ ಸಲ್ಲಿಕೆ ಮಾಡುತ್ತಿಲ್ಲ ಎಂದು ಜಡ್ಜ್ ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿದ ಲೋಕಾಯುಕ್ತ ವಿಶೇಷ ಸರ್ಕಾರಿ ಆಭಿಯೋಜಕ, ಈಗಾಗಲೇ ಅಂತಿಮ ವರದಿ ತಯಾರಾಗಿದೆ. ಅನುಮತಿ ಸಿಗದ ಕಾರಣ ಸಲ್ಲಿಕೆ ಮಾಡುತ್ತಿಲ್ಲ. ಸ್ವಲ್ಪ ಸಮಯ ನೀಡಿದರೆ ಸೀಲ್ಡ್ ಕವರ್‌ನಲ್ಲಿ ವರದಿ ನೀಡಲು ಸಿದ್ಧ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular