Monday, January 26, 2026
Google search engine

Homeರಾಜ್ಯಸುದ್ದಿಜಾಲಎಕ್ಸ್‌ಪರ್ಟ್ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂಭ್ರಮ.

ಎಕ್ಸ್‌ಪರ್ಟ್ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂಭ್ರಮ.

ವರದಿ :ಸ್ಟೀಫನ್ ಜೇಮ್ಸ್.

ಬೆಳಗಾವಿ: ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು. ಗಣ್ಯರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಿಸಿಪಿ ನಾರಾಯಣ ಭರಮನಿ ಮಾತನಾಡಿ, ‘ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೆ ಬದುಕಿನಲ್ಲಿ ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾನೂನನ್ನು ಗೌರವಿಸಬೇಕು ಹಾಗೂ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಜವಾಬ್ದಾರಿಯುತ ಪಾತ್ರ ವಹಿಸಬೇಕು,” ಎಂದು ಕಿವಿಮಾತು ಹೇಳಿದರು.

ಮತ್ತೋರ್ವ ಅತಿಥಿ ಶ್ರೀ ಶಶಿಕಾಂತ್ ಗುರೂಜಿ ಮಾತನಾಡಿ, “ಕಠಿಣ ಪರಿಶ್ರಮ ಮತ್ತು ಮೌಲ್ಯಾಧಾರಿತ ಜೀವನವೇ ಯಶಸ್ಸಿನ ಗುಟ್ಟುಎಂದರು. ಬೆಳಗಾವಿಯ ಎಕ್ಸ್‌ಪರ್ಟ್ ಪಿಯು ಕಾಲೇಜಿನಲ್ಲಿ ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ,ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಚೇರ್ಮನ್ ನಾಗೇಶ ದಂಡಾಪುರೆ ಅವರು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಉಪಯುಕ್ತ ಮಾರ್ಗದರ್ಶನ ನೀಡಿದರು.ಸಾಧಕರಿಗೆ ಸನ್ಮಾನ: ಇದೇ ಸಂದರ್ಭದಲ್ಲಿ ನಾನಾ ಶೈಕ್ಷಣಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ” ವಿದ್ಯಾರ್ಥಿಗಳನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು. ಪ್ರಮುಖರಾದ ಲಕ್ಷ್ಮಣ ದಂಡಾಪುರೆ, ರಾಮಣ್ಣ ಪಿರಗಿ, ಶಿವಾನಂದ ಮುಗಳಿಹಾಳ ಹಾಗೂ ಎಸ್. ಎನ್. ಮುಗುಟಕರ್ ಉಪಸ್ಥಿತರಿದ್ದರು.

ಪ್ರಾಂಶುಪಾಲ ಮೈಲಾರ ತೆಣಗಿ ಸ್ವಾಗತಿಸಿದರು. ಶಿರಿನ್ ದರ್ಗಾ ಹಾಗೂ ಸಂಜೀವ್ ಕೊರವಿನಕೋಪ ಕಾರ್ಯಕ್ರಮನಿರ್ವಹಿಸಿದರು. ನಾಗಶ್ರೀ ವಂದಿಸಿದರು.

RELATED ARTICLES
- Advertisment -
Google search engine

Most Popular