Wednesday, January 28, 2026
Google search engine

Homeದೇಶವಿಮಾನ ಪತನ : ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವು

ವಿಮಾನ ಪತನ : ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವು

ಮುಂಬೈ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಇದ್ದ ವಿಮಾನ ಪತನವಾಗಿದ್ದು, ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ದುರಂತ ಸಂಭವಿಸಿದೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಳಸುತ್ತಿದ್ದ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಪ್ರಯತ್ನದ ಸಂದರ್ಭದಲ್ಲಿ ಪತನಗೊಂಡು ಹಲವಾರು ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಪವಾರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ಇಂದು ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಬಾರಾಮತಿಗೆ ಹೊರಟಿದ್ದರು. ವಿಮಾನವು ಧಗಧಗನೆ ಹೊತ್ತಿ ಉರಿದಿದ್ದು, ಸುಟ್ಟು ಕರಕಲಾಗಿದೆ. ವಿಮಾನದಲ್ಲಿದ್ದ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ಲ್ಯಾಂಡಿಂಗ್ ಪ್ರಯತ್ನಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡು ಗಾಯಗೊಂಡಿದ್ದ ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ.

RELATED ARTICLES
- Advertisment -
Google search engine

Most Popular