Wednesday, January 28, 2026
Google search engine

Homeರಾಜಕೀಯನಗರದ ಎಲ್ಲಾ ಸರ್ಕಾರಿ ಜಾಗಗಳಿಗೂ ಬೇಲಿ ಹಾಕಬೇಕು : ಸಚಿವ ಕೃಷ್ಣ ಭೈರೇಗೌಡ ಸೂಚನೆ

ನಗರದ ಎಲ್ಲಾ ಸರ್ಕಾರಿ ಜಾಗಗಳಿಗೂ ಬೇಲಿ ಹಾಕಬೇಕು : ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು : ನಗರದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಜಾಗಗಳಿಗೂ ಬೇಲಿ ಅಥವಾ ರಕ್ಷಣಾ ಗೋಡೆ ಹಾಕಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ನಗರ ವ್ಯಾಪ್ತಿಯ ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮಂಗಳವಾರ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಜತೆ ಸಭೆ ನಡೆಸಿದರು. ಈ ವೇಳೆ ಅನುಮತಿ ನೀಡಿದ ಪ್ರದೇಶಕ್ಕೂ ಮೀರಿ ಅನಧಿಕೃತ ಬಡಾವಣೆ ಮಾಡಿದವರ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು. ಅಕ್ರಮ ಲೇಔಟ್ ನಿರ್ಮಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು. ಅಲ್ಲದೆ ಸೂಚನೆ ನೀಡಿದ ನಂತರವೂ ಗೋಮಾಳಗಳಲ್ಲಿ ಬಡಾವಣೆ ಮಾಡಿದವರ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ ಎಂದು ತರಾಟೆ ತೆಗೆದುಕೊಂಡರು.

ಈವರೆಗೂ ನಗರ ಹಾಗೂ ಸುತ್ತಮುತ್ತ ಅಕ್ರಮ ಬಡಾವಣೆಗಳಲ್ಲಿ ನಿರ್ಮಿಸಿರುವ ಎಷ್ಟು ಮನೆಗಳನ್ನು ನೆಲಸಮ ಮಾಡಿ ಪ್ರಕರಣಗಳನ್ನು ದಾಖಲಿಸಿದ್ದೀರಿ, ನಕಲಿ ದಾಖಲೆ ಸೃಷ್ಟಿಸುವವರು ತಮ್ಮ ಕೆಲಸ ಮುಂದುವರಿಸಿದ್ಧಾರೆ. ಕಾನೂನು ಉಲ್ಲಂಘಿಸಿ ಬಡಾವಣೆ ಮಾಡುವವರಿಗೆ ಕರುಣೆ ತೋರಿಸುವ ಅಗತ್ಯ ಇಲ್ಲ ಎಂದರು.

ಖಾಲಿ ಜಾಗ, ಸರ್ಕಾರಿ ಜಮೀನಿಗೆ ಬೇಲಿ ಇಲ್ಲವೇ ರಕ್ಷಣಾ ಗೋಡೆ ಹಾಕಲೇಬೇಕು. ನಕಾಶೆ ರಸ್ತೆ ಎಷ್ಟು ಒತ್ತುವರಿ ಆಗಿದೆ ಎಂಬ ಕುರಿತು ಮೊದಲು ಮಾಹಿತಿ ಸಂಗ್ರಹಿಸಬೇಕು. ಮತ್ತೆ ಒತ್ತುವರಿ ಆದರೆ ತಹಶೀಲ್ದಾರ್ ಅವರೇ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು. ಲ್ಯಾಂಡ್ ಬೀಟ್‌ ಆ್ಯಪ್‌ನಲ್ಲಿ ಶೇ 97 ರಷ್ಟು ಸರ್ಕಾರಿ ಭೂಮಿಯನ್ನು ಗುರುತಿಸಿ ಡೇಟಾ ಎಂಟ್ರಿ ಮಾಡಲಾಗಿದೆ. ಈ ಮಾಹಿತಿ ಉಪಯೋಗಿಸಿಕೊಂಡು ನೈಜಸ್ಥಿತಿಯನ್ನು ದಿಶಾ ಆ್ಯಪ್‌ನಲ್ಲಿ ಅಪ್ಡೇಟ್ ಮಾಡಬೇಕು‌ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular