Sunday, February 1, 2026
Google search engine

Homeಕಲೆ-ಸಾಹಿತ್ಯಮಂಗಳೂರಲ್ಲಿ ಮಡಿವಾಳ ಮಾಚಿದೇವ ಜಯಂತಿ

ಮಂಗಳೂರಲ್ಲಿ ಮಡಿವಾಳ ಮಾಚಿದೇವ ಜಯಂತಿ

ದಕ್ಷಿಣ ಕನ್ನಡ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ  ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ(ರಿ)ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಡಿವಾಳ ಮಾಚಿದೇವ ಜಯಂತಿ ಫೆಬ್ರವರಿ 1 ರಂದು ಬೆಳಿಗ್ಗೆ 10.30 ಗಂಟೆಗೆ ಮಿನಿ ವಿಧಾನಸೌಧದ ಹಿಂಭಾಗ ಇರುವ ಸರಕಾರಿ ನೌಕರರ ಭವನದ ಕರಾವಳಿ ಸಭಾಭವನದಲ್ಲಿ ನಡೆಯಲಿದೆ.
     ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್  ಘನ ಉಪಸ್ಥಿತಿಯಲ್ಲಿ,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ  ವಹಿಸಲಿದ್ದಾರೆ. ಎಕ್ಸ್‍ಪರ್ಟ್ ಕಾಲೇಜು ಉಪನ್ಯಾಸಕ ಕರುಣಾಕರ ಬಳ್ಕೂರು ಇವರು ಜಯಂತಿ ಸಂದೇಶವನ್ನು ನೀಡಲಿದ್ದಾರೆ ಎಂದು   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular