ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ ಮಾಡಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ಪದಾಧಿಕಾರಿಗಳ ಸಮ್ಮುಖದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿಂದೆ 2008 ರಿಂದ 2010 ವರೆಗೆ ಜಯಮಾಲಾ ಪ್ರಥಮ ಬಾರಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದರು. ಇದೀಗ 2026ರಿಂದ 2028ರ ಸಾಲಿನ ವರೆಗೆ ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷರಾಗಿ ಜಯಮಾಲಾ ಪದಗ್ರಹಣ ಮಾಡಿದ್ದಾರೆ.
2008ರಲ್ಲಿ ಅಧ್ಯಕ್ಷರಾಗಿದ್ದ ಜಯಮಾಲಾ ಫಿಲ್ಮ್ ಚೇಂಬರ್‍ನ ಮೊದಲ ಮಹಿಳಾ ಅಧ್ಯಕ್ಷೆ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಈ ಮೂಲಕ ದಾಖಲೆ ಮಾಡಿದ್ದರು. ಇದೀಗ ಜ.31 ರಂದು ನಡೆದ ಫಿಲ್ಮ್ ಚೇಂಬರ್ ಚುನಾವಣೆಯಲ್ಲಿ ನಿರ್ಮಾಪಕರ ವಲಯದಿಂದ ಸ್ಪರ್ಧೆ ನಡೆದಿತ್ತು. ಇದರಲ್ಲಿ ಪ್ರತಿಸ್ಪರ್ಧಿ ಭಾಮಾ ಹರೀಶ್‍ರನ್ನ ಸೋಲಿಸಿ ಜಯಮಾಲಾ ಗೆದ್ದು ಬೀಗಿದ್ದಾರೆ. ಈ ಮೂಲಕ ಎರಡನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿ ಮತ್ತೊಮ್ಮೆ ಸಾಧನೆ ಮಾಡಿದ್ದಾರೆ.



