Wednesday, February 4, 2026
Google search engine

Homeರಾಜಕೀಯಆರು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ರಾಜೀನಾಮೆ

ಆರು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ರಾಜೀನಾಮೆ

ಕೊಯಮತ್ತೂರು : ವಿಧಾನ ಸಭಾ ಚುನಾವಣೆಗೂ ಮೊದಲೇ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಕೊಯಮತ್ತೂರಿನ ಸಿಂಗನಲ್ಲೂರು ಸೇರಿದಂತೆ ಆರು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇಲ್ಲಿ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುವ ನೀರಿಕ್ಷೆ ಇದ್ದು, ತಂದೆಯ ಅನಾರೋಗ್ಯದ ಕಾರಣದಿಂದ ತಮಗೆ ಪ್ರವಾಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದರಲ್ಲದೆ ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರವಾಸದ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಇನ್ನೂ ವಿಧಾನ ಸಭಾ ಚುನಾವಣೆಯ ತಯಾರಿಯಲ್ಲಿರುವ ತಮಿಳುನಾಡಿನ ಕೊಯಮತ್ತೂರು, ಸಿಂಗನಲ್ಲೂರು ಸೇರಿದಂತೆ ಆರು ವಿಧಾನ ಸಭಾ ಕ್ಷೇತ್ರಗಳ ಚುನಾವಣಾ ಪ್ರವಾಸದ ಉಸ್ತುವಾರಿ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಅಲ್ಲಿನ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರೀಕ್ಷೆಯಿದ್ದು, ಉಸ್ತುವಾರಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯು 41 ಕ್ಷೇತ್ರಗಳಲ್ಲಿ ಹಿರಿಯ ಬಿಜೆಪಿ ನಾಯಕರನ್ನು ಉಸ್ತುವಾರಿಗಳಾಗಿ ನೇಮಿಸಿದೆ. ಇವರಲ್ಲಿ ಅಣ್ಣಾಮಲೈ ಅವರನ್ನು ಸಿಂಗನಲ್ಲೂರು, ಮಧುರೈ ದಕ್ಷಿಣ, ವಿರುಗಂಪಕ್ಕಂ, ಕಾರೈಕುಡಿ, ಶ್ರೀವೈಕುಂಡಂ, ಪದ್ಮನಾಭಪುರಂಗಳಿಗೆ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಈ ಕುರಿತು ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆಯ ಅನಾರೋಗ್ಯದ ಕಾರಣದಿಂದ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಮುಂದುವರೆದು ತಂದೆಯವರ ಆರೋಗ್ಯ ಸರಿಯಿಲ್ಲ. ಹೀಗಾಗಿ ಅವರನ್ನು ನೋಡಿಕೊಳ್ಳಲು ನಾನು ಕೊಯಮತ್ತೂರಿನಲ್ಲಿ ಉಳಿದುಕೊಳ್ಳಬೇಕಿದೆ. ಇದು ನನ್ನ ಮೊದಲ ಕರ್ತವ್ಯ. ಆದ್ದರಿಂದ ನನಗೆ ಪಕ್ಷದ ಪರವಾಗಿ ಪ್ರಚಾರಕ್ಕೆ ಹೆಚ್ಚು ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂತಿರನ್ ಅವರಿಗೆ ತಿಳಿಸಿದ್ದೇನೆ. ಪಕ್ಷವು ಬೇರೆ ಉಸ್ತುವಾರಿಯನ್ನು ನಿಯೋಜಿಸುತ್ತದೆ. ಪ್ರಚಾರದಲ್ಲಿ ನಾನು ಕೆಲಸ ಮಾಡುತ್ತೇನೆ. ಈ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದಿದ್ದಾರೆ.

ಬಳಿಕ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಹಾಗೂ 2024ರ ಸಂಸತ್ ಚುನಾವಣೆಗೆ ಸ್ಪರ್ಧಿಸಿದಾಗಿನಿಂದ ಜನರನ್ನು ಭೇಟಿ ಮಾಡುವ ಸಲುವಾಗಿ ಪ್ರತ್ಯೇಕ ಮನೆಯನ್ನು ಬಾಡಿಗೆಗೆ ಪಡೆದಿದ್ದೇನೆ. ಬಿಜೆಪಿಯಲ್ಲಿ ಕೊಯಮತ್ತೂರಿನಲ್ಲಿ ಶಾಸಕಿ ವನತಿ ಶ್ರೀನಿವಾಸನ್ ಇದ್ದಾರೆ. ಅವರು ಟಿಕೆಟ್ ಪಡೆದ ಅನಂತರ 2026 ರ ಚುನಾವಣೆಯಲ್ಲಿ ಬಹುಮತದ ಮತಗಳೊಂದಿಗೆ ಗೆಲ್ಲಬೇಕು ಎಂಬುದಾಗಿ ತಿಳಿಸಿದರು.

ಯಾವುದೇ ವೈಯಕ್ತಿಕ ಚಿಂತನೆ ಇಲ್ಲ. ರಾಷ್ಟ್ರೀಯ ನಾಯಕರು ಏನು ಸೂಚಿಸಿದ್ದಾರೆ ಎಂಬುದರ ಕುರಿತು ಸ್ಪಷ್ಟವಾಗಿದೆ. ಆ ಕಾರ್ಯಗಳ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ. ಒಂದು ತಿಂಗಳೊಳಗೆ ಮುಂದಿನ ಬೆಳವಣಿಗೆಗಳ ಬಗ್ಗೆ ತಿಳಿಯುತ್ತದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular