ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಫೆಬ್ರವರಿ 5ರಂದು ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ.
ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮಾರ್ಚ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಇಂದಿನ ಸಭೆಗೆ ಕರೆದಿದ್ದಾರೆ.



