ತುಮಕೂರು: ವಿಧಾನಸಭೆಯ ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯಲಿದ್ದು, ಮೈತ್ರಿ ಅನಿವಾರ್ಯವಾಗಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಕುರಿತು ಈಗಾಗಲೇ ನವದೆಹಲಿಯಲ್ಲಿ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಬಳಿ ಮಾತನಾಡಿ ಆಗಿದೆ ಎಂದು ತಿಳಿಸಿದರು.
ಇದೇ ವೇಳೆ ಮೆಟ್ರೊ ಪ್ರಯಾಣ ದರ ಹೆಚ್ಚಳ ಸರಿಯಲ್ಲ. ಈಗಾಗಲೇ ಜನಸಾಮಾನ್ಯರು ಬದುಕುವುದು ಕಷ್ಟಕರವಾಗಿದ್ದು, ಹೆಚ್ಚಿಸಿರುವ ದರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಇನ್ನೂ ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆದ್ದು ಸರ್ಕಾರ ರಚಿಸುತ್ತದೆ ಎಂದು ಯಡಿಯೂರಪ್ಪ ಹೇಳಿದರು.
ನಮ್ಮ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ ಯಡಿಯೂರಪ್ಪ, ಜನರು ವಿವಿಧ ಸರಕುಗಳ ಬೆಲೆ ಏರಿಕೆಯನ್ನು ನಿಭಾಯಿಸಲು ಹೆಣಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.



