Saturday, February 7, 2026
Google search engine

Homeರಾಜಕೀಯಮೆಟ್ರೋ ದರ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಮೆಟ್ರೋ ದರ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು : ಯಾವುದೇ ದರ ನಿಗದಿ ಮಾಡಿದ್ದರೂ ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ಇನ್ನೂ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ದರ ಶೇ.5 ರಷ್ಟು ಏರಿಕೆ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ ಹೇಳ್ತಾ ಸುಳ್ಳು ಹೇಳ್ತಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರದ್ದು ಕೇವಲ 20% ಅಂತಾರೆ. ರಾಜ್ಯ ಸರ್ಕಾರ ಹೆಚ್ಚಿನ ಹಣ ಹಾಕುವಾಗ, ಕೇಂದ್ರ ಸರ್ಕಾರದ ಮೇಲೆ ಏಕೆ ದೂಷಿಸುತ್ತಿದ್ದಾರೆ? ದರ ನಿಗದಿ ಮಾಡೋದು ಯಾರು? ಕೇಂದ್ರ ಸರ್ಕಾರದ ಮೇಲೆ ಹಾಕುವ ಚಾಳಿ ಅವರಿಗೆ. ಬೇರೆ ರಾಜ್ಯಗಳಲ್ಲಿ ಯಾಕೆ ದರ ಏರಿಕೆ ಆಗ್ತಿಲ್ಲ? ಇಲ್ಲಿ ನಮ್ಮದು ಹೆಚ್ಚಿನ ಪಾಲು ಅಂದ ಮೇಲೆ ಅಧಿಕಾರ ಯಾರಿಗೆ ಇದೆ? ಅಂತ ಪ್ರಶ್ನೆ ಮಾಡಿದ್ದಾರೆ.

ಮುಂದುವರೆದು ಮುಖ್ಯಂಮತ್ರಿಗಳ ಹಲವಾರು ತಪ್ಪು ನಿರ್ಣಯ, ಜನ ವಿರೋಧಿ ನೀತಿಗಳನ್ನ ಕೇಂದ್ರದ ಮೇಲೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕು. ಜನರಿಗೆ ಗ್ಯಾರಂಟಿ ಕೊಡುತ್ತಿದ್ದೇವೆ. ಈ ಮೂಲಕ ಆರ್ಥಿಕವಾಗಿ ಶಕ್ತಿ ತುಂಬಿದ್ದೇವೆ ಅಂತಾರೆ. ರಾಜ್ಯದಲ್ಲಿ ತಲಾ ಆದಾಯ, ಆರ್ಥಿಕ ಶಕ್ತಿ ನೀಡಿದ್ದೇವೆ ಅಂತ ಪದೇ ಪದೇ ಜಾಹೀರಾತು ಕೊಡುತ್ತಿದ್ದಾರೆ.

ಜನಕ್ಕೆ ತೊಂದರೆ ಇಲ್ಲ, ಆರ್ಥಿಕವಾಗಿ ಚೆನ್ನಾಗಿದ್ದಾರೆ ಅನ್ನೋದು ರಾಜ್ಯ ಸರ್ಕಾರದ ಭಾವನೆ. ಆದರಿಂದ ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳ ಭ್ರಮೆ. ಜನರೇ ಎಚ್ಚೆತ್ತುಕೊಂಡು ತೀರ್ಮಾನ ತಗೋಬೇಕು ಎಂದು ಕರೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular