ಬೆಂಗಳೂರು : ನಾಯಕತ್ವ ಬದಲಾವಣೆ ಬಗ್ಗೆ ಡಾ.ಯತೀಂದ್ರ ಅವರು ನೀಡಿರುವುದು ಅವರ ವೈಯಕ್ತಿಕ ಅಭಿಪ್ರಾಯ, ಏನು ನಡೆದಿದೆ ಎಂಬುದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಹೈಕಮಾಂಡ್‌ಗೆ ಮಾತ್ರ ಗೊತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಇನ್ನೂ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಎಂಬುದು ತೀರ್ಮಾನ ಆಗಿದೆ ಎಂಬ ಡಾ.ಯತೀಂದ್ರ ಅವರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದುವರೆದು ನಾವು ಹೈಕಮಾಂಡನ್ನು ಅವಲಂಬಿಸಿದ್ದೇವೆ, ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾಗಿದೆ ಎಂದು ಯಾರು ಹೇಳಿದ್ದಾರೆ? ಹೈಕಮಾಂಡ್ ಇದನ್ನು ಹೇಳಿದೆಯೇ? ಡಿ.ಕೆ.ಶಿವಕುಮಾರ್ ಅವರು ಹೇಳಿರಬಹುದು, ಅದು ಅವರ ಅಭಿಪ್ರಾಯ. ಅವರಿಗೆ ಗೊತ್ತಿರುವ ವಿಚಾರ ನಮಗೆ ಗೊತ್ತಿಲ್ಲ ಎಂದರು.
ಇನ್ನೂ ಹೈಕಮಾಂಡ್ ನಿರ್ಧಾರ ಕೈಗೊಳ್ಳುವವರೆಗೆ ಈ ವಿಷಯದಲ್ಲಿ ಹಲವರು ಹೇಳಿಕೆ ನೀಡಬಹುದು, ಆದರೆ ಅದು ಅವರ ಅಭಿಪ್ರಾಯಗಳಷ್ಟೇ. ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.



