ಎಂ.ಡಿ.ಎಂ.ಎ. ಮಾರಾಟ ಮಾಡಲು ಅನುಮಾನಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ದಕ್ಷಿಣ ಕನ್ನಡದಲ್ಲಿ ಬಂಧಿಸಲಾಗಿದೆ.
ಉಪ್ಪಿನಂಗಡಿ ಗ್ರಾಮದ ಪಂಜಳಲ್ಲಿ ಪೊಲೀಸರು ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಯಹ್ಯಾ ಕೊಕ್ಕಡ (48) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ವಿಚಾರಣೆ ವೇಳೆ ಆತನು ಮಾರಾಟ ಉದ್ದೇಶದಿಂದ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನಿಂದ ಒಟ್ಟು 2.16 ಗ್ರಾಂ ಎಂ.ಡಿ.ಎಂ.ಎ. (ಅಂದಾಜು ಮೌಲ್ಯ ರೂ. 3,000), ಒಂದು ಐಫೋನ್ (ರೂ. 45,000), ಒಂದು ಸ್ಯಾಮ್ಸಂಗ್ ಕೀ-ಪ್ಯಾಡ್ ಮೊಬೈಲ್ (ರೂ. 1,000) ಸೇರಿದಂತೆ ಒಟ್ಟು ರೂ. 49,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 19/2026
ಕಲಂ: 8(ಸಿ), 22(ಬಿ) ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



