Thursday, February 12, 2026
Google search engine

Homeರಾಜ್ಯಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಬೆಂಗಳೂರು, ಮೈಸೂರು ಸೇರಿ ಹಲವೆಡೆ ಏಕಕಾಲಕ್ಕೆ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಬೆಂಗಳೂರು, ಮೈಸೂರು ಸೇರಿ ಹಲವೆಡೆ ಏಕಕಾಲಕ್ಕೆ ದಾಳಿ

ಬೆಂಗಳೂರು/ಮೈಸೂರು/ದಾವಣಗೆರೆ : ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ಬೆಸ್ಕಾಂ ಇಂಜಿನಿಯರ್‌ ಆರ್.ಹೆಚ್ ಅರ್ಜುನ್‌ ಅವರ ಮನೆ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳ ತಂಡಗಳಿಂದ ದಾವಣಗೆರೆ, ಶಿವಮೊಗ್ಗದಲ್ಲೂ ದಾಳಿ ನಡೆಸಿದೆ.

ದಾವಣಗೆರೆಯ ಬೆಸ್ಕಾಂನ ಸಿವಿಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಜುನ್‌ ವಿರುದ್ಧ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದ ತಂಡ ದಾಳಿ ನಡೆಸಿದೆ.

ಅರ್ಜುನ್‌ ವಾಸವಿದ್ದ ದಾವಣಗೆರೆ ನಗರದ ನಿಟ್ಟುವಳ್ಳಿನಲ್ಲಿ ರೂಮ್, ಕಚೇರಿ ಹಾಗೂ ಶಿವಮೊಗ್ಗದ ಮನೆಯ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮನೆಯಲ್ಲಿ ಆಸ್ತಿ ಪತ್ರ ಹಾಗೂ ಚಿನ್ನ ಬೆಳ್ಳಿ ಪತ್ತೆಯಾಗಿದ್ದು, ಇನ್ನಷ್ಟು ಮಹತ್ವದ ದಾಖಲೆಗಳನ್ನ ಪತ್ತೆಹಚ್ಚಲು ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

RELATED ARTICLES
- Advertisment -
Google search engine

Most Popular